








ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯು ಫೆ.20ರಂದು ಪೂರ್ವಾಹ್ನ 11 ಗಂಟೆಗೆ ಅಧೀಕ್ಷಕ ಇಂಜಿನಿಯರ್ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿ ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಉಪವಿಭಾಗ ಕಚೇರಿಯಲ್ಲಿ ನಡೆಸಲಾಗುವುದು. ಗ್ರಾಹಕರು ತಮ್ಮ ಕುಂದುಕೊರತೆಗಳನ್ನು ಸುಳ್ಯ ಉಪವಿಭಾಗ ಕಚೇರಿಯಲ್ಲಿ ಅಥವಾ ದೂರವಾಣಿ ಕರೆಯ ಮೂಲಕ ಸಲ್ಲಿಸಬಹುದು ಎಂದು ಸುಳ್ಯ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.









