ಬಾಳಿಲ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ ತರಗತಿ ಆರಂಭ

0

ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರ್ಯ ಇದರ
ಉಸ್ತುವಾರಿಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ವಿದ್ಯಾ ಬೋಧಿನಿ ಪ್ರೌಢಶಾಲೆಯ ಸಭಾಂಗಣದಲ್ಲಿ ಶುಭಾರಂಭಗೊಂಡಿದೆ.

ವಿದ್ಯಾ ಬೋದಿನಿ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಗೀತ ಗುರುಗಳಾದ ಶ್ರೀಮತಿ ಸಾಗರಿಕ ಎಸ್ ಆದಿತ್ಯ ಕೋಟೆ ಸಂಗೀತ ಕಲಿಕೆಯ ಉಪಯೋಗ ಮತ್ತು ಮಹತ್ವದ ಬಗ್ಗೆ ತಿಳಿಸಿದರು. ಆ ಬಳಿಕ ಹೊಸದಾಗಿ ಸಂಗೀತವನ್ನು ಕಲಿಯಲು ಬಂದ ವಿದ್ಯಾರ್ಥಿಗಳಿಗೆ ಸಂಗೀತದ ಆರಂಭದ ಹಂತವನ್ನು ಆರಂಭಿಸಿದರು. ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆಯ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬಾಳಿಲ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರಿಯ ಇದರ ಉಪಾಧ್ಯಕ್ಷ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ವಹಿಸಿದರು. ಶ್ರೀ ಮಹಾವಿಷ್ಣು ಸಿಂಗಾರಿ ಮೇಳದ ಅಧ್ಯಕ್ಷರಾದ ಲೋಕೇಶ್ ಬೆಳ್ಳಿಗೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು .ವಿದ್ಯಾ ಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕುಮಾರಿ ಶುಭ ವಂದಿಸಿದರು. ಸಿಂಗಾರಿ ಮೇಳ ಧ ಟೀಮ್ ಮ್ಯಾನೇಜರ್ ರಘುರಾಮ ಕೆ ಪ್ರಾರ್ಥನೆ ಹಾಡಿದರು.