ಬೆಳ್ಳಾರೆ ಅಜಪಿಲ ದೇವಸ್ಥಾನದ ಬಸವ ಮೃತ್ಯು

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಸವ ಈಶ ಇಂದು ಬೆಳಿಗ್ಗೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.


ಕೆಲ ದಿನಗಳಿಂದ ವಯೋ ಸಹಜ ಖಾಯಿಲೆಯಿಂದ ಅಸೌಖ್ಯಕ್ಕೊಳಗಾಗಿದ್ದ ದನಕ್ಕೆ
ಪಶುವೈದ್ಯಾಧಿಕಾರಿಗಳು ಬಂದು ಚಿಕಿತ್ಸೆ ನೀಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಅಸುನೀಗಿರುವುದಾಗಿ ತಿಳಿದು ಬಂದಿದೆ.
ಮೃತಪಟ್ಟ ಬಸವ ಈಶನಿಗೆ ಅಂತಿಮ ವಿಧಿ ವಿದಾನಗಳನ್ನು ನೆರವೇರಿಸಲಾಯಿತು.
ಬಳಿಕ ದೇವಸ್ಥಾನದ ಜಾತ್ರಾ ಧಾರ್ಮಿಕ ಕಾರ್ಯಕ್ರಮಗಳ ನಡೆಯಲಿದೆ ಎಂದು ತಿಳಿದು ಬಂದಿದೆ.