ಫೆ. 18, 19 : ಮಂಗಳೂರಿನಲ್ಲಿ ಒಕ್ಕಲಿಗರ ಫ್ರೀಮಿಯರ್ ಲೀಗ್ – ಅಂತರ್‌ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ

0

ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಯುವ ಘಟಕದ ವತಿಯಿಂದ ಒಕ್ಕಲಿಗರ ಫ್ರೀಮಿಯರ್ ಲೀಗ್ 2024 ಅಂತರ್‌ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ಫೆ. 18 ಮತ್ತು 19 ರಂದು ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಂದ್ಯಾಟವು ಫೆ. 18 ರಂದು ಬೆಳಿಗ್ಗೆ 7 ಗಂಟೆಗೆ ಪ್ರಾರಂಭಗೊಳ್ಳಲಿದ್ದು, ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ 1೦ ಗಂಟೆಗೆ ನಡೆಯಲಿದೆ.ಫೆ.. 19 ರಂದು ಸಂಜೆ 7 ಗಮಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಅನೇಕ ಗಣ್ಯರು, ಅತಿಥಿಗಳು ಭಾಗವಹಿಸಲಿದ್ದಾರೆ. ಪಂದ್ಯಾಟದಲ್ಲಿ ದ.ಕ., ಕೊಡಗು, ಉಡುಪಿ, ಕಾಸರಗೋಡು ಜಿಲ್ಲೆಯ ಒಕ್ಕಲಿಗ ಸಮುದಾಯದ ತಂಡಗಳು ಭಾಗವಹಿಸಲಿದ್ದು, ಈಗಾಗಲೇ 32 ತಂಡಗಳು ನೋಂದಾಯಿಸಿಕೊಂಡಿವೆ. ಫೆ. 17 ಮತ್ತು 18ರಂದು ನಿಗದಿಯಾಗಿದ್ದ ಕ್ರಿಕೆಟ್ ಪಂದ್ಯಾಟವು ಫೆ. 17ರಂದು ರಾಜ್ಯ ಕಾಂಗ್ರೆಸ್ ಸಮಾವೇಶವು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆಯುವುದರಿಂದ ಮುಖ್ಯಮಂತ್ರಿಗಳ ಶಿಷ್ಟಾಚಾರ ಅಧಿಕಾರಿಗಳ ಮತ್ತು ಪೊಲೀಸ್ ಇಲಾಖೆಯ ವಿನಂತಿಯ ಮೇರೆಗೆ ಫೆ. 18 ಮತ್ತು 19 ಕ್ಕೆ ಮುಂದೂಡಲಾಗಿದೆ ಎಂದು ಯುವ ಘಟಕದ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.