ಸಂಪಾಜೆ: ಸಂವಿಧಾನ ಜಾಗೃತಿ ಜಾಥಕ್ಕೆ ಅದ್ದೂರಿ ಸ್ವಾಗತ

0

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ

ಸಂವಿಧಾನದ ಮೌಲ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥವು ಫೆ.17ರಂದು ಸುಳ್ಯ ತಾಲೂಕಿಗೆ ಆಗಮಿಸಿದ್ದು, ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಕಲ್ಲುಗುಂಡಿಯ ಕೂಲಿಶೆಡ್ ಬಳಿ ರಥವನ್ನು ಅದ್ದೂರಿಯಾಗಿ ಸ್ವಾಗತಿಸಿ, ಬರಮಾಡಿಕೊಳ್ಳಲಾಯಿತು.

ಬಳಿಕ ಸಿಂಗಾರಿ ಮೇಳ , ಬ್ಯಾಂಡ್ ಸೆಟ್, ಶಾಲಾ ವಿದ್ಯಾರ್ಥಿಗಳು ಸಂವಿಧಾನದ ಜಾಗೃತಿ ಬ್ಯಾನರನ್ನು ಹಿಡಿದು ಕಾಲ್ನಡಿಗೆಯ, ಮೂಲಕ ಕೆನರಾ ಬ್ಯಾಂಕ್ ಬಳಿಯವರೆಗೆ ರಥವನ್ನು ಕರೆತರಲಾಯಿತು.

ಈ ಸಂದರ್ಭದಲ್ಲಿ ರಥದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆ‌ರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗ್ರಾ. ಪಂ ಉಪಾಧ್ಯಕ್ಷ ಎಸ್. ಕೆ. ಹನೀಫ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಓಲ್ಗಾ ಡಿಸೋಜ, ಕಾರ್ಯದರ್ಶಿ ಪದ್ಮಾವತಿ ಮತ್ತು ಸದಸ್ಯರು ಹಾರಾರ್ಪಣೆ ಮಾಡಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಎಸ್. ಕೆ ಹನೀಫ್ ಅಧ್ಯಕ್ಷತೆ ವಹಿಸಿದ್ದರು.
ಸಂವಿಧಾನದ ಸಂಪನ್ಮೂಲ ವ್ಯಕ್ತಿಯಾಗಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ಪ್ರಾಂಶಪಾಲ ಲೋಕ್ಯಾ ನಾಯ್ಕ್ ಸಂವಿಧಾನದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.


ವೇದಿಕೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರಿತಾ ಓಲ್ಗಾ ಡಿಸೋಜ, ಕಾರ್ಯದರ್ಶಿ ಪದ್ಮಾವತಿ, ಸಂವಿಧಾನ ಜಾಗೃತಿ ಕಲಾ ತಂಡದ ಮುಖ್ಯಸ್ಥ ಗಿರೀಶ್ ನಾವಾಡ, ಸಹಾಯಕ ಇಂಜಿಯರ್ ಪ್ರೀತಿ ಪಿ., ಮಾಜಿ ಅಧ್ಯಕ್ಷರಾದ ಶ್ರೀಮತಿ ಸುಂದರಿ ಮುಂಡಡ್ಕ,ಸದಸ್ಯರುಗಳಾದ
ರಜನಿ, ಅನುಪಮಾ, ವಿಮಲಾ ಪ್ರಸಾದ್,ವಿಜಯಕುಮಾರ್,
ಸಂಜೀವಿನಿ ಒಕ್ಕೂಟದ ಸದಸ್ಯರುಗಳಾದ ಕಾಂತಿ ,ಸೌಮ್ಯ, ಲಯನ್ಸ್ ಕ್ಲಬ್ ಅಧ್ಯಕ್ಷ ಯೋಗಿಶ್ವರ್, ಸಂಪಾಜೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸದಸ್ಯರುಗಳು , ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ,ಸ್ತ್ರೀಶಕ್ತಿ ಸಂಜೀವಿನಿ, ಧರ್ಮ ಸ್ಥಳ ಯೋಜನೆಯ ಸ್ವಸಹಾಯ ಸಂಘ, ಪೊಲೀಸ್ ಸಿಬ್ಬಂದಿ ಸೇರಿದಂತೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸಂವಿಧಾನದ ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಓಲ್ಗಾ ಡಿಸೋಜ ಸ್ವಾಗತಿಸಿ , ಕಾರ್ಯದರ್ಶಿ ಪದ್ಮಾವತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.