ಅರಂತೋಡು: ಸಂವಿಧಾನ ಜಾಗೃತಿ ಜಾಥಕ್ಕೆ ಸ್ವಾಗತಿಸಿದ ಗ್ರಾ.ಪಂ. ಆಡಳಿತ

0

ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ

ಸಂವಿಧಾನದ ಮೌಲ್ಯಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ರಥವು ಅರಂತೋಡು ಗ್ರಾಮಕ್ಕೆ ಫೆ.17ರಂದು ಅಪರಾಹ್ನ ಆಗಮಿಸಿದಾಗ ಗೂನಡ್ಕದ ಬಳಿಯಿಂದ ಸ್ವಾಗತಿಸಲಾಯಿತು.

ಬಳಿಕ ಮೆರವಣಿಗೆ ಮೂಲಕ ಸಾಗಿ ಗ್ರಾ.ಪಂ. ವಠಾರಕ್ಕೆ ಆಗಮಿಸಿದಾಗ ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ ಹಾಗೂ ಉಪಾಧ್ಯಕ್ಷೆ ಶ್ರೀಮತಿ ಭವಾನಿ ಸಿ.ಎ. ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್. ಅರಂತೋಡು-ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ ಅವರು ರಥದಲ್ಲಿರುವ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಅರಂತೋಡು ಶ್ರೀ ದುರ್ಗಾಮಾತ ಭಜನಾ ಮಂದಿರದ ಅಧ್ಯಕ್ಷ ಕೆ.ಆರ್. ಪದ್ಮನಾಭ, ನಿವೃತ್ತ ಶಿಕ್ಷಕರಾದ ಕೆ.ಆರ್. ಗಂಗಾಧರ, ಹೊನ್ನಪ್ಪ ಮಾಸ್ತರ್ ಅಡ್ತಲೆ, ಅರಂತೋಡು ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಬನ, ಜತ್ತಪ್ಪ ಅಳಿಕೆ, ಅರಂತೋಡು ಶಾಲಾ ಎಸ್.ಡಿ.ಎಂ.ಸಿ‌. ಅಧ್ಯಕ್ಷ ಸುರೇಶ್, ವಿವಿಧ ಇಲಾಖೆಯ ಅಧಿಕಾರಿವರ್ಗದರು, ಅರಂತೋಡು ಎನ್‌.ಎಂ.ಸಿ. ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು, ಅಧ್ಯಾಪಕರುಗಳು, ಸಹಕಾರಿ ಸಂಘದ ನಿರ್ದೇಶಕರುಗಳು, ಅರಂತೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಪದಾಧಿಕಾರಿಗಳು, ಗ್ರಾ.ಪಂ. ಸದಸ್ಯರುಗಳು, ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿವರ್ಗದವರಿಗೆ ಸಂವಿಧಾನದ ಜಾಗೃತಿ ಮೂಡಿಸುವ ಸುದ್ದಿ ಜನಾಂದೋಲನ ಲಂಚ ಭ್ರಷ್ಟಾಚಾರ ವಿರೋಧಿ ಫಲಕ ಹಸ್ತಾಂತರ ಮಾಡಲಾಯಿತು.

ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.