ಕಂದ್ರಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮಗ್ರ ಕಾಮಗಾರಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2 ಲಕ್ಷ ಅನುದಾನದ ಮಂಜೂರಾತಿ ಆದೇಶ ಪತ್ರ ವಿತರಣೆ

0

ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ದ. ಕ. ಜಿ. ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸ್ತುತ ನಡೆದ ಶಾಲಾ ಶತಮಾನೋತ್ಸವದ ಪ್ರಯುಕ್ತ ರಂಗಮಂದಿರ ರಚನೆ, ಶಾಲಾ ಮೈದಾನ ವಿಸ್ತರಣೆ, ಶಾಲಾ ಕಂಪೌಂಡ್ ರಚನೆ, ಶಾಲಾ ಕಟ್ಟಡಗಳ ಕಾಮಗಾರಿಗಳನ್ನು ಕೈಗೊಂಡಿದ್ದು, ಈ ಸಮಗ್ರ ಕಾಮಗಾರಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರೂ. 2 ಲಕ್ಷ ಅನುದಾನವನ್ನು ಮಂಜೂರು ಮಾಡಿರುತ್ತಾರೆ. ಇದರ ಮಂಜೂರಾತಿ ಆದೇಶ ಪತ್ರವನ್ನು ಫೆ.19ರಂದು ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ನಾಗೇಶ್ ಪಿ ಯವರು ಶಾಲಾಭಿವೃದ್ಧಿ ಸಮಿತಿಯವರಿಗೆ ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ಕಂದ್ರಪ್ಪಾಡಿ, ಗುತ್ತಿಗಾರು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ, ಗುತ್ತಿಗಾರು ಪ್ರಗತಿ ಬಂಧು ಒಕ್ಕೂಟಗಳ ವಲಯ ಅಧ್ಯಕ್ಷರಾದ ಯೋಗೀಶ್ ದೇವ, ಶತಮಾನೋತ್ಸವ ಕಾರ್ಯಕ್ರಮದ ಪ್ರಧಾನ ಕಾರ್ಯದರ್ಶಿ ಲಿಂಗಪ್ಪ ಗೌಡ ಚಿತ್ತಡ್ಕ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಕೇಶ್ ರಾಜ ಹಿರಿಯಡ್ಕ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೀತಮ್ ಮುಂಡೋಡಿ, ಕಂದ್ರಪ್ಪಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ತಿಮ್ಮಪ್ಪ ಕಡ್ಯಾ, ಕಂದ್ರಪ್ಪಾಡಿ ಒಕ್ಕೂಟದ ಅಧ್ಯಕ್ಷರಾದ ಪ್ರದೀಪ್ ಕುತ್ಯಾಳ, ಒಕ್ಕೂಟದ ಪದಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಾಣಿ ವಂದಿಸಿದರು.