ದುಗ್ಗಲಡ್ಕದಲ್ಲಿ ನೂತನ ಸಾರ್ವಜನಿಕ ಶೌಚಾಲಯ ನಿರ್ಮಾಣ- ಕಾಮಗಾರಿಗೆ ಚಾಲನೆ

0

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ದುಗ್ಗಲಡ್ಕದಲ್ಲಿ ನೂತನ ಸಾರ್ವಜನಿಕ ಶೌಚಾಲಯ ನಿರ್ಮಾಣಗೊಳ್ಳಲಿದ್ದು, ಇಂದು ನಗರ ಪಂಚಾಯತ್ ಮಾಜಿ ಅಧ್ಯಕ್ಷ ರು ಮತ್ತು ಸದಸ್ಯರು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.


ದುಗ್ಗಲಡ್ಕದ ಬಸ್ ತಂಗುದಾಣದ ಹಿಂಬದಿಯಲ್ಲಿ ಸ್ವಚ್ಚ ಭಾರತ್ ಯೋಜನೆಯ ಅನುದಾನದಲ್ಲಿ ರೂ.9 ಲಕ್ಷ ವೆಚ್ಚದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಗೊಳ್ಳಲಿದೆ.


ಇಂದು ನಗರ ಪಂಚಾಯತ್ ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ನ.ಪಂ.ಸದಸ್ಯೆ ಶ್ರೀಮತಿ ಶಶಿಕಲಾ ಎ.ನೀರಬಿದಿರೆ, ಉಬರಡ್ಕ ಮಿತ್ತೂರು ಗ್ರಾ.ಪಂ.ಸದಸ್ಯ ಹರೀಶ್ ರೈ ಉಬರಡ್ಕ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸ್ಥಳೀಯರಾದ ದಿನೇಶ್ ಡಿ.ಕೆ, ಶ್ರೀಕಾಂತ್ ಮಾವಿನಕಟ್ಟೆ, ನಾರಾಯಣ ನಾಯ್ಕ್, ಪರಮೇಶ್ವರ ನಾಯ್ಕ್ ನೀರಬಿದಿರೆ, ಚಂದ್ರಶೇಖರ್ , ಶ್ರೀಧರ್ ರೈ, ಶಿವಕುಮಾರ್ ಈಶ್ವರಡ್ಕ, ತಮೀಮ್ ಮೊದಲಾದವರು ಇದ್ದರು.