ಸಂಪಾಜೆ : ಕಾರು – ರಿಕ್ಷಾ ಮುಖಾಮುಖಿ ಢಿಕ್ಕಿ

0

ರಿಕ್ಷಾ ಚಾಲಕನಿಗೆ ಗಾಯ ಆಸ್ಪತೆಗೆ ದಾಖಲು

ಆಟೋ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾಗಿ ಆಟೋರಿಕ್ಷಾ ಪಲ್ಟಿಯಾದ ಘಟನೆ ಸಂಪಾಜೆ ಗ್ರಾಮದ ಕೈಪಡ್ಕದಲ್ಲಿ ಫೆ.20ರಂದು ಸಂಜೆ ಸಂಭವಿಸಿದ್ದು, ಗಾಯಾಳು ರಿಕ್ಷಾ ಚಾಲಕನನ್ನು ಸುಳ್ಯದ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದುಬಂದಿದೆ.

ಸಂಪಾಜೆಯಿಂದ ಕಲ್ಲುಗುಂಡಿಗೆ ಬರುತ್ತಿದ್ದ ಸುರೇಶ್ ಅವರು ಚಲಾಯಿಸುತ್ತಿದ್ದ ಆಟೋ ರಿಕ್ಷಾಕ್ಕೆ ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಆಲ್ಟೋ ಕಾರು ಕೈಪಡ್ಕ ಎಂಬಲ್ಲಿ ಢಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಅಟೋ ರಿಕ್ಷಾ ಪಲ್ಟಿಯಾಗಿ , ಚಾಲಕನಿಗೆ ಗಾಯವಾಗಿದ್ದು, ಗಾಯಾಳು ಚಾಲಕ ಸುರೇಶ್ ಅವರನ್ನು ಸ್ಥಳೀಯರು ಸೇರಿ ಸುಳ್ಯದ ಅಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರೆಂದು ತಿಳಿದುಬಂದಿದೆ.