ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೂತನ ಶೌಚಾಲಯ ಉದ್ಘಾಟನೆ

0

ಶಿಕ್ಷಣ ಕ್ಷೇತ್ರಕ್ಕೆ ಯೂನಿಯನ್ ಬ್ಯಾಂಕಿನ ದೊಡ್ಡ ಕೊಡುಗೆ : ಎಸ್.ಎನ್.ಮನ್ಮಥ

ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಾದೇಶಿಕ ಕಚೇರಿ ಮಂಗಳೂರು ಇವರು ಸಿ.ಎಸ್.ಆರ್ .ಫಂಡ್ ನಿಂದ ಅನುದಾನವನ್ನು ಒದಗಿಸಿ ನೂತನವಾಗಿ ನಿರ್ಮಾಣವಾದ ಶೌಚಾಲಯದ ಉದ್ಘಾಟನೆಯು ಫೆ.20 ರಂದು ನಡೆಯಿತು.
ಯೂನಿಯನ್ ಬ್ಯಾಂಕ್ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಮಹೇಶ್ ಜೆ ಮತ್ತು ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿಯವರು ನೂತನವಾಗಿ ನಿರ್ಮಾಣವಾದ ಶೌಚಾಲಯವನ್ನು ಉದ್ಘಾಟಿಸಿಸಿದರು.


ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಮಹೇಶ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಯೂನಿಯನ್ ಬ್ಯಾಂಕಿನಿಂದ ವಿದ್ಯಾರ್ಥಿಗಳಿಗೆ ಸಿಗುವ ಸವಲತ್ತುಗಳು ಮತ್ತು ಬ್ಯಾಂಕಿನಲ್ಲಿ ಖಾತೆ ತೆರೆಯುವ ಬಗ್ಗೆ ಮಾಹಿತಿ ನೀಡಿ ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾದ ಶೌಚಾಲವನ್ನು ಉತ್ತಮವಾಗಿ ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಹೇಳಿದರು.


ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ಮಾತನಾಡಿ ಯೂನಿಯನ್ ಬ್ಯಾಂಕ್ ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯನ್ನು ನೀಡಿದೆ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.


ವೇದಿಕೆಯಲ್ಲಿ ಮಂಗಳೂರು ಯೂನಿಯನ್ ಬ್ಯಾಂಕ್ ಉಪ ಪ್ರಾದೇಶಿಕ ಕಚೇರಿಯ ಮುಖ್ಯಸ್ಥ ವಿಶುಕುಮಾರ್, ಸುಳ್ಯ ಯೂನಿಯನ್ ಬ್ಯಾಂಕಿನ ಹಿರಿಯ ಶಾಖಾ ವ್ಯವಸ್ಥಾಪಕ ಅಜಯ್ ಕುಮಾರ್ ಟಿ.ಕೆ,ಬೆಳ್ಳಾರೆ ಯೂನಿಯನ್ ಬ್ಯಾಂಕಿನ ಶಾಖಾ ವ್ಯವಸ್ಥಾಪಕ, ಪುನಿತ್ ಆರ್.ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ,ಸದಸ್ಯೆ ಮಮತಾ ಉದ್ದಂಪಾಡಿ,ಎಸ್.ಡಿ.ಎಂ.ಸಿ.ಅಧ್ಯಕ್ಷ ನವೀನ್ ಕುಮಾರ್ ಎ, ಮಾಜಿ ಅಧ್ಯಕ್ಷ ನಾಗಪ್ಪ ಗೌಡ ಪಾಲೆಪ್ಪಾಡಿ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಾವತಿ ಸ್ವಾಗತಿಸಿ,ದೈಹಿಕ ಶಿಕ್ಷಣ ಶಿಕ್ಷಕಿ ಮಾಲತಿ ಹಾಗೂ ಶಿಕ್ಷಕ ಅರವಿಂದರವರು ಕಾರ್ಯಕ್ರಮ ನಿರೂಪಿಸಿದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು.


ಈ ಸಂದರ್ಭದಲ್ಲಿ ಕಾಂಟ್ರಾಕ್ಟರ್ ಅಜಿತ್ ,ಶಾಂತಾರಾಮ ಕಣಿಲೆಗುಂಡಿ, ವಿದ್ಯಾರ್ಥಿಗಳ ಪೋಷಕರು,ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.