ಅಲ್ಪಸಂಖ್ಯಾತರ, ದಲಿತರ, ಧಮನಿತರ ಧ್ವನಿಯಾಗಿ ಎಸ್ ಡಿ ಪಿ ಐ ಪಕ್ಷ ಬೆಳೆಯುತ್ತಿದೆ

0

ಸರ್ವರಿಗೂ ಸಮಪಾಲು ಸಮಬಾಳು ನಮ್ಮ ಪಕ್ಷದ ಧ್ಯೇಯ: ರಿಯಾಝ್ ಫರಂಗಿಪೇಟೆ

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಡೆಯುತ್ತಿರುವ ಕೆಲವು ಅಸಂವಿಧಾನಾತ್ಮಕ ಕೃತ್ಯಗಳು, ಎಗ್ಗಿಲ್ಲದೆ ನಡೆಯುತ್ತಿರುವ ಭ್ರಷ್ಟಾಚಾರ ನಮ್ಮ ದೇಶವನ್ನು ಅದ ಪತನಕ್ಕೆ ಕೊಂಡೊಯ್ಯುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ದೊಡ್ಡ ದೊಡ್ಡ ರಾಜಕೀಯ ಪಕ್ಷಗಳು ಅದರ ವೈಫಲ್ಯಗಳ ಬಗ್ಗೆ, ಕಾನೂನು ಕಟ್ಟಳೆಗಳ ಬಗ್ಗೆ ಚರ್ಚೆಗಳನ್ನು ನಡೆಸಲು ಆರಂಭಿಸಿದೆ. ಇದಕ್ಕೆ ಎಸ್‌ಡಿಪಿಐ ಪಕ್ಷ ಕಾರಣವಾಗಿದ್ದು ನಮ್ಮ ಪಕ್ಷದ ಸಿದ್ಧಾಂತ ಸರ್ವರಿಗೂ ಸಮಪಾಲು ಸಮ ಬಾಳು ಎಂಬುವುದೇ ಆಗಿದೆ ಎಂದು ಸೋಶಿಯಲ್ ಡೆಮಾಕ್ರೆಟಿ ಪಾರ್ಟಿ ಆಫ್ ಇಂಡಿಯಾ ಇದರ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ.


ಅವರು ಇಂದು ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆದ ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷದ ಸಮಾವೇಶದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿ ಪಕ್ಷದ ಕಾರ್ಯಕರ್ತರುಗಳಿಗೆ ಮುಂದಿನ ಲೋಕಸಭಾ ಚುನಾವಣೆಗೆ ಸಿದ್ದರಾಗಲು ಕರೆ ನೀಡಿ ಮಾತನಾಡಿದರು. ಕಳೆದ ೧೪ ವರ್ಷಗಳಿಂದ ನಮ್ಮ ಪಕ್ಷವು ರಾಜಕೀಯವಾಗಿ ಅದ್ಭುತವಾಗಿ ಪ್ರವರ್ತಿಸುತ್ತಿದ್ದು ಅನ್ಯಾಯ ಮಾಡುವ ಕೈಗಳನ್ನು ತಡೆಯುವ ಕೆಲಸಗಳನ್ನು ಮಾಡುತ್ತಾ ಬರುತ್ತಿದೆ. ನಮ್ಮ ಪಕ್ಷದಿಂದ ಎಲ್ಲಿಯೂ ಕೂಡ ಕಾನೂನು ಬಾಹಿರ ಚಟುವಟಿಕೆಗಳು ನಡೆದಿಲ್ಲ. ಮುಂದೆ ನಡೆಯುವುದು ಇಲ್ಲ. ಆದ್ದರಿಂದ ನಮ್ಮ ಕಾರ್ಯಕರ್ತರು ತಳಮಟ್ಟದಿಂದಲೇ ಬೆಳೆದು ಬರಬೇಕಾಗಿದೆ.


ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ೬೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಗುರಿಯನ್ನು ನಮ್ಮ ರಾಷ್ಟ್ರೀಯ ಸಮಿತಿ ಹೊಂದಿಕೊಂಡಿದೆ ಎಂದು ಹೇಳಿದರು.
ಸಮಾವೇಶದ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ರಜಾಕ್ ಕೆನರಾ ವಹಿಸಿದ್ದರು.


ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಪಕ್ಷದ ದ ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ನೆರವೇರಿಸಿದರು.
ವೇದಿಕೆಯಲ್ಲಿ ವಿಕ್ಟರ್ ಮಾರ್ಟಿಸ್ ಉಪಾಧ್ಯಕ್ಷರು ಎಸ್ ಡಿ ಪಿ ಐ ದ.ಕ ಜಿಲ್ಲೆ, ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರುಗಳಾದ ಬಾಬು ಎನ್ ಸವಣೂರು,ಅಬ್ದುಲ್ ಕಲಾಂ ಸುಳ್ಯ, ಕಾರ್ಯದರ್ಶಿ ಶರೀಫ್ ನಿಂತಿಕಲ್, ಕೋಶಾಧಿಕಾರಿ ಅಬ್ದುಲ್ ರಹಮಾನ್ ತಂಬಿನಮಕ್ಕಿ, ಮುಖಂಡರುಗಳಾದ ರಮ್ಲಾನ್ ಸನ್‌ರೈಸ್ ಕಡಬ,
ಮಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮ ಮಲ್ಲೂರು, ಸವಣೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ರಫೀಕ್ ಎಂ ಎ,ಸಬೀನ,ಮಾಜಿ ಸದಸ್ಯರಾದ ಮೀನಾಕ್ಷಿ, ಕೊಯಿಲ ಗ್ರಾಮ ಪಂಚಾಯತಿ ಸದಸ್ಯ ಸಬಿಯಾ, ರಾಮ ಕುಂಜ ಗ್ರಾಮ ಪಂಚಾಯತಿ ಸದಸ್ಯ ಚೆನ್ನು, ಬೆಳ್ಳಾರೆ ಗ್ರಾಮ ಪಂಚಾಯತಿ ಸದಸ್ಯ ನಸೀಮಾ ಹಾರಿಸ್, ವಿಧಾನಸಭಾ ಕ್ಷೇತ್ರ ಸಮಿತಿಯ ಜೊತೆ ಅಶ್ರಫ್ ಟರ್ಲಿ ಉಪಸ್ಥಿತರಿದ್ದರು.


ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ಅಬ್ದುಲ್ ಕಲಾಂ ಸುಳ್ಯ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ ನಿರೂಪಿಸಿದರು. ಕಾರ್ಯದರ್ಶಿ ಶರೀಫ್ ನಿಂತಿಕಲ್ಲು ವಂದನಾರ್ಪಣೆ ಗೈದರು.


ಕಾರ್ಯಕ್ರಮದಲ್ಲಿ ಪಕ್ಷ ಸಂಘಟನೆಯ ಕುರಿತು ಮುಖಂಡರು ಮತ್ತು ಕಾರ್ಯಕರ್ತರ ಸಮಾಲೋಚನೆ ಪಕ್ಷದಿಂದ ನಡೆದ ಕಾರ್ಯ ಚಟುವಟಿಕೆಗಳ ಮತ್ತು ಯೋಜನೆಗಳ ಕುರಿತ ಚಿತ್ರ ಪ್ರಸಾರ ಕಾರ್ಯಕ್ರಮ ನಡೆಯಿತು.
ಸುಳ್ಯ ವಿಧಾನಸಭಾ ಕ್ಷೇತ್ರದ ನೂರಾರು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿದ್ದರು.