ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಮೂಲಭೂತ ಸೌಕರ್ಯಗಳ ಬಗ್ಗೆ ಸುದೀರ್ಘ ಚರ್ಚೆ

ಐವರ್ನಾಡು ಗ್ರಾಮ ಪಂಚಾಯತ್ 2023-24 ನೇ ಸಾಲಿನ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿಯವರ ಅಧ್ಯಕ್ಷತೆಯಲ್ಲಿ ಫೆ.21 ರಂದು ಐವರ್ನಾಡು ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಿತು.
ಯುವ ಜನ ಸೇವಾ ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ನೋಡೆಲ್ ಅಧಿಕಾರಿಯಾಗಿದ್ದರು.


ಪಿಡಿಒ ಶ್ಯಾಮ್ ಪ್ರಸಾದ್ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.
ಗ್ರಾಮ ಪಂಚಾಯತ್ ಕಾರ್ಯದರ್ಶಿ ತಿರುಮಲೇಶ್ವರ ರವರು ವರದಿ ಮಂಡಿಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ,ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.