ಶಾಲಾ ವಿದ್ಯಾರ್ಥಿಗಳಿಗೆ ರಾಗಿ ಹೆಲ್ತ್ ಮಿಕ್ಸ್ ವಿತರಣೆ

0

ಕರ್ನಾಟಕ ಸರ್ಕಾರದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಕೊಡಲ್ಪಡುವ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪೌಷ್ಟಿಕ ಆಹಾರ ವಿತರಣೆಯ ತಾಲೂಕು ಮಟ್ಟದ ಉದ್ಘಾಟನಾ ಕಾರ್ಯಕ್ರಮ ಫೆ.22ರಂದು ಗಾಂಧಿನಗರ ಕೆಪಿಎಸ್ ಶಾಲಾ ಸಭಾಂಗಣದಲ್ಲಿ ನಡೆಯಿತು.

ಕರ್ನಾಟಕ ಸರ್ಕಾರ ಪಿ.ಎಂ.ಪೋಷಣ್ ( ಮ.ಉ.ಯೋ) ತಾಲೂಕು ಪಂಚಾಯತ್ ಸುಳ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕೆಪಿಎಸ್ ಗಾಂಧಿನಗರ ಇದರ ಆಶ್ರಯದಲ್ಲಿ ಶಾಲಾ ಶಿಕ್ಷಣ ಇಲಾಖೆ , ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆಎಂಎಫ್ ಸಂಸ್ಥೆ ಇವರ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸರ್ಕಾರ ಮತ್ತು ಅನುದಾನಿತ ಶಾಲೆಗಳಲ್ಲಿನ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಮಧ್ಯಾಹ್ನದ ಉಪಹಾರ ಯೋಜನೆಯಡಿಯಲ್ಲಿ ಈ ಪೌಷ್ಟಿಕ ಆಹಾರವನ್ನು ನೀಡಲಾಗುತ್ತದೆ.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಲಾ ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ಚಿದಾನಂದ ಕುತ್ಪಾಜೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಕ್ಷರ ದಾಸೋಹ ಇಲಾಖೆ ಸುಳ್ಯ ಸಹಾಯಕ ನಿರ್ದೇಶಕಿ ಶ್ರೀಮತಿ ವೀಣಾ ಎಂ ಟಿ ಪೌಷ್ಟಿಕ ಆಹಾರದ ಕುರಿತು ಮಾಹಿತಿ ನೀಡಿದರು.


ನಗರ ಪಂಚಾಯತ್ ಸದಸ್ಯರುಗಳಾದ ಪ್ರವಿತಾ ಪ್ರಶಾಂತ್ ಹಾಗೂ ಷರೀಫ್ ಕಂಠಿ ಸಾಂಕೇತಿಕವಾಗಿ ಪೌಷ್ಟಿಕ ಆಹಾರದ ವಿತರಣೆಯನ್ನು ನಡೆಸಿದರು.


ವೇದಿಕೆಯಲ್ಲಿ ಶಾಲಾ ಉಪ ಪ್ರಾಂಶುಪಾಲೆ ಜ್ಯೋತಿ ಲಕ್ಷ್ಮಿ, ನಿವೃತ್ತ ಮುಖ್ಯೋಪಾಧ್ಯಾಯನಿ ಶ್ರೀಮತಿ ಎ.ಜಿ.ಭವಾನಿ,ಎಸ್ ಡಿ ಎಂ ಸಿ ಸದಸ್ಯರುಗಳಾದ ರಾಮಮುರಳಿ, ಅಝೀಝ್,ವಿಜಯ ದೇಂಗೋಡಿ, ನವೀನ್,ಅನಿತಾ ಕಾಯರ್ತೋಡಿ ಉಪಸ್ಥಿತರಿದ್ದರು.

ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪದ್ಮನಾಭ ಅತ್ಯಾಡಿ ಸ್ವಾಗತಿಸಿ, ಶಿಕ್ಷಕಿ ಪುಷ್ಪಾವತಿ ವಂದಿಸಿದರು.