ಫೆ. 25: ಮಂಡೆಕೋಲು ಗ್ರಾಮದಲ್ಲಿ ಆಧಾರ್ ನೊಂದಾಣಿ – ತಿದ್ದುಪಡಿ ಮತ್ತು ಬೃಹತ್ ರಕ್ತದಾನ ಶಿಬಿರ

0

ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ , ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಹಾಗೂ ಮಂಡೆಕೋಲು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಫೆಬ್ರವರಿ 25 ಅದಿತ್ಯವಾರದಂದು ಮಂಡೆಕೋಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆಧಾರ್ ನೊಂದಾಣಿ ಹಾಗೂ ತಿದ್ದುಪಡಿ ಶಿಬಿರ ಬೆಳ್ಳಿಗೆ 9 ರಿಂದ ಸಂಜೆ 5 ಗಂಟೆಯವರೆಗೆ ಮತ್ತು ಬೃಹತ್ ರಕ್ತದಾನ ಶಿಬಿರ ಬೆಳ್ಳಿಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆಯಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.