ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ – 2024

0

ಕ್ರೀಡೆಯು ಶರೀರ ಸ್ಥಿತಿ ಮತ್ತು ಮನಸಿಕ ಸಮತೋಲನದ ಬೆಳವಣಿಗೆಗೆ ಅಗತ್ಯವಾದ ಅಂಶವಾಗಿದೆ, ಅದು ವೈಯಕ್ತಿಕ ಬದಲಾವಣೆಗೆ ಮತ್ತು ಸಮಾಜ ಸುಧಾರಣೆಗೆ ಸಹಕಾರಿಯಾಗಿದೆ : ಡಾ. ಉಜ್ವಲ್ ಯು.ಜೆ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ೨೩ನೇ ಫೆಬ್ರವರಿ ೨೦೨೪ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ನಿವೃತ್ತ ದೈಹಿಕ ಶಿಕ್ಷಕರು ಹಾಗೂ ಸುಳ್ಯ ತಾಲೂಕಿನ ಲಗೋರಿ ಗೇಮ್ಸ್‌ನ ಮುಖ್ಯಸ್ಥರು ದೊಡ್ಡಣ್ಣ ಬರೆಮೇಲು ಮುಖ್ಯ ಅತಿಥಿಗಳಾಗಿದ್ದರು.

ಮುಖ್ಯ ಅತಿಥಿಗಳ ದಿಶೆಯಲ್ಲಿ ಮಾತನಾಡಿದ ಅವರು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆಯ ಮಹತ್ವ ಬಹಳ ಹೆಚ್ಚಿನದ್ದು. ಕ್ರೀಡೆಯಲ್ಲಿ ಹೆಚ್ಚಿನ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸರಕಾರದ ಉದ್ಯೋಗಾವಕಾಶ ಹೆಚ್ಚು ಎಂದು ನುಡಿದು ನೆರೆದ ಸರ್ವರಿಗೂ ಕ್ರೀಡಾ ಕೂಟಕ್ಕೆ ಶುಭ ಹಾರೈಸಿ ಎಲ್ಲರೂ ಕ್ರೀಡಾ ಮನೋಭಾವದಿಂದ ಇವತ್ತಿನ ದಿನವನ್ನು ಅನಂದಿಸಿ ಎಂದು ನುಡಿದರು. ಡಾ. ಉಜ್ವಲ್ ಯು.ಜೆ., ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು/ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಇವರು ಗೌರವ ಅತಿಥಿಯಾ ಮಾತನಾಡಿ ಕ್ರೀಡೆಯಿಂದ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಹೆಚ್ಚಿಸಬಹುದಲ್ಲದೆ ದೈಹಿಕ ಆರೋಗ್ಯವನ್ನು ಹೆಚ್ಚಿಸಬಹುದು ಎಂದು ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳಿ ಎಂದು ಹುರಿದುಂಬಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಇವರು ಮಾತನಾಡಿ ವಿದ್ಯಾರ್ಥಿಗಳ ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು. ಕೆ.ವಿ.ಜಿ. ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನ ದೈಹಿಕ ಶಿಕ್ಷಕರಾದ ತೀರ್ಥವರ್ಣ ತೀರ್ಪುಗಾರರಾಗಿ ಸಹಕರಿಸಿದರು. ಕ್ರೀಡಾ ಕೂಟದಲ್ಲಿ ಎನ್.ಎಸ್.ಎಸ್. ವತಿಯಿಂದ ತಂಪಾದ ಪಾನೀಯ ವಿತರಣೆ ಮತ್ತು ಪ್ರಥಮ ಚಿಕಿತ್ಸೆಯ ಸೌಲಭ್ಯವನ್ನು ಒದಗಿಸಿದರು. ದೈಹಿಕ ಉಪನ್ಯಾಸಕರಾದ
ಶ್ರೀ ಭಾಸ್ಕರ್ ಎಸ್.ಬಿ., ಪ್ರೊ. ಅಜಿತ್ ಬಿ.ಟಿ., ಎನ್.ಎಸ್. ಘಟಕಾಧಿಕಾರಿ ಡಾ. ಪ್ರಜ್ಞ ಎಂ.ಆರ್ ಮತ್ತು ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಪ್ರೊ. ಲೋಕೇಶ್ ಪಿ.ಸಿ ಕ್ರೀಡಾ ಕೂಟದ ಕಾರ್ಯಕ್ರಮವನ್ನು ಸಂಯೋಜಿಸಿದರು. ಉಪ ಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ, ಆಡಳಿತಾಧಿಕಾರಿ ಶ್ರೀ ನಾಗೇಶ್ ಕೊಚ್ಚಿ, ಪ್ರಸನ್ನ ಕುಮಾರ್ ಕಲ್ಲಾಜೆ, ಮಾಧವ ಬಿ.ಟಿ., ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ಬೋಧಕ, ಬೋದಕೇತರ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.