ಮಂಡೆಕೋಲಿನಲ್ಲಿ ಆಧಾರ್ ನೋಂದಣಿ , ತಿದ್ದುಪಡಿ ಮತ್ತು ರಕ್ತದಾನ ಶಿಬಿರ

0

ಸುಳ್ಯ ಅಮರ ಸಂಘಟನಾ ಸಮಿತಿ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಮತ್ತು ಮಂಡೆಕೋಲು ಗ್ರಾಮ ಪಂಚಾಯತ್ ಹಾಗೂ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಸಹಕಾರದೊಂದಿಗೆ ಆಧಾರ್ ನೊಂದಾಣಿ, ತಿದ್ದುಪಡಿ ಮತ್ತು ರಕ್ತದಾನ ಶಿಬಿರ ಫೆ. ೨೫ರಂದು ಪ್ರಾ.ಕೃ.ಪ.ಸ.ಸಂಘದ ಅಮೃತ ಸಭಾಭವನ ಮಂಡೆಕೋಲಿನಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ (ರಿ) ಸುಳ್ಯ ಇದರ ಅಧ್ಯಕ್ಷ ಸಾತ್ವಿಕ್ ಮಡಪ್ಪಾಡಿ ಇವರು ವಹಿಸಿದ್ದರು. ಮಂಡೆಕೋಲು ಗ್ರಾಮ ಪಂಚಾಯತ್ ಸದಸ್ಯರಾದ ಬಾಲಚಂದ್ರ ದೇವರಗುಂಡ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಮಂಡೆಕೋಲು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರತಿಮಾ ಹೆಬ್ಬಾರ್ ,ಮಂಡೆಕೋಲು ಪಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ದ ಅಧ್ಯಕ್ಷ ರಾಮಕೃಷ್ಣ ರೈ ಪೇರಾಲುಗುತ್ತು , ಮಂಡೆಕೋಲು ಪಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಪಾಧ್ಯಕ್ಷೆ ಜಲಜಾ ದೇವರಗುಂಡ , ಸುಳ್ಯದ ಯುವ ನ್ಯಾಯವಾದಿ ವಿಪುಲ್ ನೀರ್ಪಾಡಿ , ಅಮರ ಸಂಘಟನಾ ಸಮಿತಿ (ರಿ) ಸುಳ್ಯ ಇದರ ಸದಸ್ಯರಾದ ಸಾವಿತ್ರಿ ಕಣಿಮರಡ್ಕ , ಮಂಡೆಕೋಲು ಪಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಚಾಕೋಟೆ ,ಪಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮಂಡೆಕೋಲು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಇದರ ಡಾ.ಸೀತಾರಾಮ್ ಭಟ್ ಆಧಾರ್ ಕೇಂದ್ರದ ಸಿಬ್ಬಂದಿ ಕೃಪೇಶ್ ಹಾಗೂ ಮೋಹಿತ್ ಉಪಸ್ಥಿತರಿದ್ದರು. ನೂರಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಭಾಗವಹಿಸಿ ಪ್ರಯೋಜನ ಪಡೆದರು. ತೀರ್ಥೇಶ್ ಯಾದವ್ ಕಾರ್ಯಕ್ರಮ ನಿರೂಪಿಸಿದರು. ಸಾವಿತ್ರಿ ಕಣಿಮರಡ್ಕ ಸ್ವಾಗತಿಸಿ, ಜಯಪ್ರಸಾದ್ ಸಂಕೇಶ ವಂದಿಸಿದರು. ಅಮರ ಸಂಘಟನಾ ಸಮಿತಿಯ ಪ್ರದೀಪ್ ಬೊಳ್ಳೂರು ,ಪ್ರವೀಣ್ ಕುಲಾಲ್ , ಹಸ್ತವಿ ಮಡಪ್ಪಾಡಿ ,ಮನೀಶ್ ಪೈಲಾರು , ಅನಿತಾ ಕುಕ್ಕುಜಡ್ಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಯಶಸ್ವಿಗೆ ಅಮರ ಸಂಘಟನಾ ಸಮಿತಿಯ ಎಲ್ಲ ಸದಸ್ಯರು ಸಹಕರಿಸಿದರು.