ಆಲೆಟ್ಟಿ : ಕುಡೆಕಲ್ಲು ಬಳಿ ಬೈಕ್ ಮತ್ತು ಕಾರು ಮಧ್ಯೆ ಅಪಘಾತ

0

ಡಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಹಿಡಿದ ಸ್ಥಳೀಯ ಯುವಕರು

ಆಲೆಟ್ಟಿ ಕುಡೆಕ್ಕಲ್ ಸಮೀಪ ರಸ್ತೆಯ ತಿರುವಿನಲ್ಲಿ ದ್ವಿಚಕ್ರ ವಾಹನಕ್ಕೆ ಎದುರು ಭಾಗದಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು ಬೈಕ್ ಸವಾರನ ಕಾಲಿಗೆ ಗಾಯವಾದ ಘಟನೆ ಇದೀಗ ವರದಿಯಾಗಿದೆ.

ಡಿಕ್ಕಿ ಹೊಡೆದ ಕಾರಿನ ಚಾಲಕ ವಾಹನವನ್ನು ನಿಲ್ಲಿಸದೆ ಮತ್ತೆ ಸುಳ್ಯದ ಕಡೆಗೆ ತಿರುಗಿಸಿ ವೇಗವಾಗಿ ಬಂದಿದ್ದು ಸ್ಥಳೀಯ ಯುವಕರು ಆತನನ್ನು ಬೆನ್ನಟ್ಟಿ ಹಿಡಿದು ಸುಳ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಬೈಕ್ ಸವಾರ ಸುಳ್ಯದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಯೋಗೀಶ್ ಎಂಬುವರ ಕಾಲಿನ ಬೆರಳುಗಳು ಜಖಂಗೊಂಡಿದ್ದು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೆ ವಿ ಜಿ ಆಸ್ಪತ್ರೆಗೆ ತೆರಳಿದ್ದಾರೆ.
ಸುಳ್ಯ ಪೊಲೀಸರು ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದು ಕ್ರಮ ಕೈಗೊಂಡಿದ್ದಾರೆ.