ರಾಜ್ಯಮಟ್ಟದ ಲಗೋರಿ ಪಂದ್ಯಾಟ : ದಕ್ಷಿಣ ಕನ್ನಡ ಜಿಲ್ಲೆ ಚಾಂಪಿಯನ್

0

ಕೆ.ಆರ್.ಪೇಟೆ: ಕರ್ನಾಟಕ ರಾಜ್ಯ ಲಗೋರಿ ಅಸೋಸಿಯೇಷನ್, ಕೆ.ಆ‌ರ್.ಪೇಟೆ ತಾಲೂಕು ಲಗೋರಿ ಅಸೋಸಿಯೇಷನ್ ವತಿಯಿಂದ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ನಡೆದ ರಾಜ್ಯ ಮಟ್ಟದ ಲಗೋರಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. 14 ವರ್ಷದೊಳಗಿನ ವಯಸ್ಸಿನ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ

ಚಿಕ್ಕಮಗಳೂರು ಪ್ರಥಮ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆಯಿತು. 17 ವರ್ಷದೊಳಗಿನ ಹುಡುಗ, ಹುಡುಗಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಮಂಡ್ಯ ಜಿಲ್ಲೆ ದ್ವಿತೀಯ ಸ್ಥಾನ ಪಡೆಯಿತು. ಪುರುಷರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಕೊಡಗು ದ್ವಿತೀಯ ಸ್ಥಾನ ಪಡೆಯಿತು. ಮಹಿಳಾ ವಿಭಾಗದಲ್ಲಿ ಚಿಕ್ಕಮಗಳೂರು ಪ್ರಥಮ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಗೆ ಸಮಗ್ರ ಪ್ರಶಸ್ತಿ ಲಭಿಸಿತು. ಬಿಲ್ಲೆಗೆ ಚೆಂಡೆಸೆಯುವ ಮೂಲಕ ತಹಶೀಲ್ದಾರ್ ನಿಸರ್ಗಪ್ರಿಯ ಪಂದ್ಯಾಟವನ್ನು ಉದ್ಘಾಟಿಸಿದರು. ರಾಜ್ಯ ಆರ್ ಟಿ ಓ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ, ಶಾಸಕರಾದ ಹೆ ಟಿ ಮಂಜು, ಹಾಸನ ಜಿಲ್ಲಾ ಉಪನಿರ್ದೇಶಕರಾದ ಜವರೇಗೌಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪೂರ್ಣಚಂದ್ರ ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಲಗೋರಿ ಅಸೋಸಿಯೇಷನ್‌ನ ಅಧ್ಯಕ್ಷ ದೊಡ್ಡಣ್ಣ ಬರೆಮೇಲು ಅಧ್ಯಕ್ಷತೆ ವಹಿಸಿದ್ದರು.