ಅರಂಬೂರು: ಕಾರಿನ ಹಿಂಬದಿಗೆ ಬೈಕ್ ಢಿಕ್ಕಿಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

0

ಕಾರಿನ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಪರಮೇಶ್ವರ ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ, ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು, ಖಾಸಗಿ ಟೂರಿಸ್ಟ್ ಬಸ್ ನ ಅಡಿಗೆ ತಲೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಪರಮೇಶ್ವರ ಅವರನ್ನು ಅಂಬ್ಯುಲೆನ್ಸ್ ಮೂಲಕ ಸುಳ್ಯದ ಸರ್ಕಾರಿ ಆಸ್ಪತ್ರೆಯ ಕರೆತಂದು ಪ್ರಥಮ ಚಿಕಿತ್ಸೆ ನೀಡಿ, ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅಲ್ಲಿ ಅವರು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

ಸಂಪಾಜೆ ಗ್ರಾಮದ ದೊಡ್ಡಡ್ಕ ನಿವಾಸಿಯಾಗಿರುವ ಪರಮೇಶ್ವರ ಅವರು ಸುಳ್ಯದ ಗಾಂಧಿನಗರದಲ್ಲಿ ಕಬ್ಬಿಣದ ಕೆಲಸ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಅವರಿಗೆ 49 ವರ್ಷ ವಯಸ್ಸಾಗಿದ್ದು, ಪತ್ನಿ ನಳಿನಿ, ಪುತ್ರ ಧನುಷ್ , ಪುತ್ರಿ ಧನ್ವಿ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.