ಕದಿಕಡ್ಕ: ಪ್ರಯಾಣಿಕರ ತಂಗುದಾಣದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0

ಗ್ರಾ.ಪಂ. ನಿಂದ ಪೊಲೀಸರಿಗೆ ಮಾಹಿತಿ

ಜಾಲ್ಸೂರು ಗ್ರಾಮದ ಕದಿಕಡ್ಕ ಪ್ರಯಾಣಿಕರ ಬಸ್ಸು ತಂಗುದಾಣದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಫೆ.28ರಂದು ಬೆಳಿಗ್ಗೆ ವರದಿಯಾಗಿದೆ.

ಬೆಳಿಗ್ಗೆ ಈ ಭಾಗದ ನಾಗರಿಕರು ಬಂದಾಗ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಕಂಡುಬಂದಿದ್ದು, ಬಳಿಕ ಗ್ರಾ.ಪಂ.ಗೆ ವಿಷಯ ತಿಳಿಸಿದ್ದು, ಗ್ರಾ.ಪಂ. ವತಿಯಿಂದ ಸುಳ್ಯ ಪೊಲೀಸ್ ಠಾಣೆಗೆ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.