ಐವರ್ನಾಡು : ಪಾಲೆಪ್ಪಾಡಿಯಲ್ಲಿ ಪಂಜುರ್ಲಿ ಹಾಗೂ ಗುಳಿಗ ದೈವದ ನೇಮೋತ್ಸವ

0

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಪಂಜುರ್ಲಿ ದೈವಸ್ಥಾನದಲ್ಲಿ ಪಂಜುರ್ಲಿ ಹಾಗೂ ಗುಳಿಗ ದೈವದ ನೇಮೋತ್ಸವವು ಫೆ.27 ರಂದು ಭಕ್ತಿ,ಸಂಭ್ರಮದಿಂದ ನಡೆಯಿತು.
ಫೆ. 19 ರಂದು ಗೊನೆ ಕಡಿಯಲಾಯಿತು.
ಫೆ.27 ರಂದು ಬೆಳಿಗ್ಗೆ ಶ್ರೀ ದೈವಗಳ ಭಂಡಾರ ತೆಗೆಯಲಾಯಿತು.
ರಾತ್ರಿ ಅನ್ನಸಂತರ್ಪಣೆ ಬಳಿಕ ಶ್ರೀ ಪಂಜುರ್ಲಿ ಹಾಗೂ ಗುಳಿಗ ದೈವಗಳ ನೇಮೋತ್ಸವ ಪ್ರಸಾದ ವಿತರಣೆ ನಡೆಯಿತು.


ಈ ಸಂದರ್ಭದಲ್ಲಿ
ಶ್ರೀ ಪಂಜುರ್ಲಿ ದೈವಸ್ಥಾನದ ಆಡಳಿತ ಸಮಿತಿಯವರು ಹಾಗೂ ನೇಮೋತ್ಸವ ಸಮಿತಿಯವರು ಮತ್ತು ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.