ತನ್ವಿ ಚಿಕ್ಮುಳಿಗೆ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

0

ವರ್ಷಿಣಿ ಯೋಗ ಶಿಕ್ಷಣ ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ಶಿವಮೊಗ್ಗ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇದರ ಸಹಯೋಗದೊಂದಿಗೆ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಸ್ಮರಣಾರ್ಥ ೬ನೇ ವರ್ಷದ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆ ವಾಸವಿ ಪಬ್ಲಿಕ್ ಶಾಲೆ ಕೋಟೆ ರಸ್ತೆ ಶಿವಮೊಗ್ಗದಲ್ಲಿ ಫೆ. 25 ರಂದು ನಡೆಯಿತು. 15 ರಿಂದ 20 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ತನ್ವಿ ಚಿಕ್ಮುಳಿ ಪ್ರಥಮ ಸ್ಥಾನವನ್ನು ಪಡೆದರು.

ಯೋಗ ಗುರು ಶರತ್ ಮರ್ಗಿಲಡ್ಕರವರ ಜೊತೆಗೆ ಮಾರ್ಗದರ್ಶನ ಪಡೆದಿರುತ್ತಾಳೆ. ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ೯ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.