ಸುಳ್ಯ ಪದವಿ ಕಾಲೇಜು ಎನ್‌ಎಸ್‌ಎಸ್ ಶಿಬಿರದ ಸಮಾರೋಪ

0

ನಿರಂತರ ಪರಿಶ್ರಮದಿಂದ ಮಾತ್ರ ವಿದ್ಯಾರ್ಥಿಗಳ ಸಾಧನೆ ಸಾಧ್ಯ: ಧೀರನ್ ಪರಮಲೆ

ವಿದ್ಯಾರ್ಥಿಗಳಲ್ಲಿ ನಿರಂತರ ಪರಿಶ್ರಮ ಅಗತ್ಯ ನಿರಂತರ ಪರಿಶ್ರಮ ಇಲ್ಲದೆ ವಿದ್ಯಾರ್ಥಿಗಳು ಸಾಧನೆ ಮಾಡಲು ಅಸಾಧ್ಯ ಮುಂದೆ ಗುರಿಯಿಟ್ಟು ವಿಧ್ಯಾರ್ಥಿಗಳು ಪ್ರಯತ್ನಶೀಲರಾಗಬೇಕು. ಆಗ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಮ್ಯಾನೇಜ್‌ಮೆಂಟ್ ಕನ್ಸಲೆಂಟ್ ಬೆಂಗಳೂರು ಇದರ ಸಂಚಾಲಕರಾದ ಧೀರನ್ ಪರಮಲೆ ಹೇಳಿದರು.

ಅವರು ಫೆ-೨೪ರಂದು ನಡುಗಲ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡುತ್ತಿದ್ದರು.ಸಭೆಯ ಅಧ್ಯಕ್ಷತೆಯನ್ನು ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಜಯಶ್ರೀ ಕೆ. ವಹಿಸಿದ್ದರು.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು ಭಾಗೀರಥಿ ಮುರುಳ್ಯ ಭಾಗವಹಿಸಿ ಆಶಯ ನುಡಿಗಳನ್ನಾನಾಡಿದರು. ಈ ಸಂದರ್ಭದಲ್ಲಿ ನಡುಗಲ್ಲು ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. ಅತಿಥಿಗಳಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮಿತ್ರ ಮೂಖಮಲೆ, ಸ್ಥಳೀಯ ಮುಖಂಡರಾದ ವೆಂಕಟ್ ವಳಲಂಬೆ, ಸದಸ್ಯರಾದ ವಿಜಯಕುಮಾರ್ ಚಾರ್ಮತ, ಪಿ.ಎಂ ಪೋಷನ್ ತಾಲೂಕು ಪಂಚಾಯತ್ ಸುಳ್ಯ ಇದರ ಸಹಾಯಕ ನಿರ್ದೇಶಕರಾದ ಶ್ರೀಮತಿ ವೀಣಾ ಎಂ.ಟಿ, ನಡುಗಲ್ಲು ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಪಿ, ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಲತಾ ಎಂ ರೈ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಉಮೇಶ್ವರಿ ನೆಲ್ಲಿಪುಣಿ, ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚಂದ್ರಶೇಖರ ಮಾವಿನಕಟ್ಟೆ, ಗ್ರಾಮ ಪಂಚಾಯತ್ ಸದಸ್ಯರಾದ ಲೀಲಾವತಿ ಅಂಜೇರಿ, ಎನ್ ಎಸ್ ಎಸ್ ನಾಯಕರುಗಳಾದ ಪೃಥ್ವಿರಾಜ್ ಟಿ, ಸಾಕೇತ್ ಕೆ ಕೆ, ಸ್ಫೂರ್ತಿ ರೈ ಬಿ, ತೃಪ್ತಿ ಕೆ, ಅಮೃತ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್‍ಯಕ್ರಮ ಆರಂಭವಾಯಿತು. ಶಿಬಿರಾಧಿಕಾರಿ ಡಾ.ಲತಾ ಎನ್ ಸ್ವಾಗತಿಸಿದರು. ಶಿಬಿರಾಧಿಕಾರಿ ರಾಮಕೃಷ್ಣ ಕೆ ವಂದಿಸಿದರು. ಶಿಬಿರಾರ್ಥಿ ಭರತ್ ಕುಮಾರ್ ಕಾರ್‍ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಸಿಗುವ ಅನುಭವಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜೀವನದಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ. ಇದರಿಂದ ಶಿಬಿರದ ನೆನಪುಗಳು ಶಾಶ್ವತವಾಗಿರುತ್ತದೆ. ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಹೇಳಿದರು.