ಸುಬ್ರಹ್ಮಣ್ಯದ ಜನತೆಯ ಯಾವುದೇ ಸಮಸ್ಯೆ ಪರಿಹಾರಕ್ಕೆ ನಮ್ಮಿಂದಾದ ಪ್ರಾಮಾಣಿಕ ಪ್ರಯತ್ನ ಮಾಡ್ತೇವೆ

0

ಅಧ್ಯಕ್ಷೆ ಶ್ರೀಮತಿ ಸುಜಾತ ಕಲ್ಲಾಜೆ ಸ್ಪಷ್ಟನೆ

ಸುಬ್ರಹ್ಮಣ್ಯ ಗ್ರಾ.ಪಂ ವ್ಯಾಪ್ತಿಯ ಜನತೆಯ ಯಾವುದೇ ಸಮಸ್ಯೆ ಪರಿಹಾರಕ್ಕೆ ನಮ್ಮಿಂದಾದ ಪ್ರಾಮಾಣಿಕ ಪ್ರಯತ್ನ ಮಾಡ್ತೇವೆ ಎಂದು ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಜಾತ ಕಲ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಮಾರಧಾರ ನದಿಯಲ್ಲಿ ಮೊಸಳೆ ಕಚ್ಚಿ ಸಾವಿಗೀಡಾಗಿ ದನ ಮೂರು ದಿನಗಳಿಂದ ನದಿಯಲ್ಲಿ ತೇಲಿಕೊಂಡು ಇದ್ದಬಗ್ಗೆ ಮಾದ್ಯಮ ವರದಿಯಾಗಿದ್ದು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ದನದ‌ ದೇಹವನ್ನು ರವಿ ಕುಕ್ಕೆ ಪದವು ಸೇವಾ ಟ್ರಸ್ಟ್ ಕಡೆಯಿಂದ ನದಿಯಿಂದ ಮೇಲೆತ್ತಿ ಅದಕ್ಕೆ ಬೇಕಾದ ಕಾರ್ಯವನ್ನು ಮಾಡಿರುವುದು ಶ್ಲಾಘನೀಯ . ಅದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ. ಇದೇ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ತಿಳಿಸಿ ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಲು ತಿಳಿಸಿದ್ದೇನೆ ಹಾಗೂ ಇದರ ಸಂಪೂರ್ಣ ಖರ್ಚನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಭರಿಸುವುದಾಗಿ ತಿಳಿಸಿದ್ದೇನೆ . ದಯವಿಟ್ಟು ಸುಬ್ರಹ್ಮಣ್ಯದ ಜನತೆ ಯಾವುದೇ ಗೊಂದಲಕ್ಕೆ ಕಿವಿಗೊಡದೆ ತಮ್ಮ ಯಾವುದೇ ಸಮಸ್ಯೆಗಳಿಗೆ ನಮ್ಮಿಂದಾದ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಈ ಮೂಲಕ ತಿಳಿಯಪಡಿಸಲು ಇಚ್ಚಿಸುತ್ತೇನೆ. ಎಂದು ಸುಬ್ರಹ್ಮಣ್ಯ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ.ಸುಜಾತ ಧನಂಜಯ ಕಲ್ಲಾಜೆ ತಿಳಿದ್ದಾರೆ.