ಸಂಪಾಜೆ ಅರಣ್ಯ ಇಲಾಖೆ ವತಿಯಿಂದ ಕಾಡ್ಗಿಚ್ಚು, ಬೆಂಕಿಯಿಂದ ಅರಣ್ಯ ರಕ್ಷಣೆ ಮತ್ತು ಸಾರ್ವಜನಿಕರ ಸಹಕಾರ ಕುರಿತು ಕಾರ್ಯಕ್ರಮ

0

ಕೊಡಗು ಸಂಪಾಜೆ ಅರಣ್ಯ ಇಲಾಖೆ ವತಿಯಿಂದ, ಸುಳ್ಯ ಅಗ್ನಶಾಮಕದಳ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ಮತ್ತು ಗ್ರಾಮ ಅರಣ್ಯ ಸಮಿತಿಯ ಸದಸ್ಯರುಗಳಿಗೆ ಕಾಡ್ಗಿಚ್ಚು, ಬೆಂಕಿಯಿಂದ ಅರಣ್ಯ ರಕ್ಷಣೆ ಹಾಗೂ ಸಾರ್ವಜನಿಕರ ಸಹಕಾರ ಕುರಿತು ಮತ್ತು ಅಣಕು ಪ್ರದರ್ಶನ ಕಾರ್ಯಕ್ರಮ ಫೆ.29 ರಂದು ಕೊಯನಾಡು ಶಾಲಾ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪಾಜೆ ಉಪವಲಯ ಅರಣ್ಯಾಧಿಕಾರಿಗಳಾದ ವಿಜೇಂದ್ರ., ಬಸವರಾಜ್., ನಿಸ್ಸಾರ್ ಹಾಗೂ ಸಿಬ್ಬಂದಿಗಳು & ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ಶ್ರೀ ನಾರಾಯಣ ಗೌಡ, ಕಲ್ಲಪ್ಪ & ಸಿಬ್ಬಂದಿಗಳು ಸಂಪಾಜೆ ಗ್ರಾಮ ಪಂಚಾಯಿತಿ ಸದಸ್ಯರಾದ ನವೀನ್ , ಶಾಲಾ ಮಕ್ಕಳು, ಶಿಕ್ಷಕರು, ಗ್ರಾಮಸ್ಥರು & ಗ್ರಾಮ ಅರಣ್ಯ ಸಮಿತಿಯ ಸದಸ್ಯರು, ಸಂಪಾಜೆ ಗ್ರಾಮ ಪಂಚಾಯಿತಿ ಸದಸ್ಯರಾದ ನವೀನ್ ಉಪಸ್ಥಿತರಿದ್ದರು