ಸುಬ್ರಹ್ಮಣ್ಯ ಅರಣ್ಯ ಇಲಾಖೆ : ವಸತಿ ಸಮುಚ್ಚಯ ಉದ್ಘಾಟನೆ

0

ಕರ್ನಾಟಕ ಸರಕಾರ ಅರಣ್ಯ ಇಲಾಖೆ ಮಂಗಳೂರು ವಿಭಾಗ ಸುಬ್ರಹ್ಮಣ್ಯ ವಲಯದ ಉಪವಲಯ ಅರಣ್ಯಾಧಿಕಾರಿ ಹಾಗೂ ಗಸ್ತು ಅರಣ್ಯ ಪಾಲಕರ ವಸತಿಗೃಹದ ಉದ್ಘಾಟನೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕೊಂಬಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುನಾಥ್ ಹಾಗೂ ಸದಸ್ಯರು ಮತ್ತು ಮಂಗಳೂರು ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರವೀಣ್ ಶೆಟ್ಟಿ ಹಾಗೂ ಸುಬ್ಬಯ್ಯ ನಾಯ್ಕ್, ವಲಯ ಅರಣ್ಯಾಧಿಕಾರಿಗಳಾದ ವಿಮಲ್ ಬಾಬು , ಗಿರೀಶ ಹಾಗೂ ಮಂಜುನಾಥ್ ಮತ್ತು ಸುಬ್ರಹ್ಮಣ್ಯ ವಲಯದ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.