ಲೋಕಸಭಾ ಚುನಾವಣೆ ಹಿನ್ನೆಲೆ : ರೌಡಿ ಶೀಟರ್ ಗಳ ಮನೆಗಳಿಗೆ ತೆರಳಿ ಪೊಲೀಸರ ಎಚ್ಚರಿಕೆ

0

ಲೋಕ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ವ್ಯಕ್ತಿಗಳ ಮನೆಗಳಿಗೆ ಆಯಾ ಠಾಣಾ ವ್ಯಾಪ್ತಿಯ ಠಾಣಾಧಿಕಾರಿಗಳು ಪರಿಶೀಲನೆ ನಡೆಸಿ ಕಾನೂನು ಬಾಹಿರ ಕೃತ್ಯಗಳಿಗೆ ಭಾಗವಹಿಸದಂತೆ ಎಚ್ಚರಿಕೆ ನೀಡಿರುವುದಾಗಿ ತಿಳಿದುಬಂದಿದೆ.

ಸುಳ್ಯ ಪರಿಸರದಲ್ಲೂ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ 5ಕ್ಕೂ ಹೆಚ್ಚು ಮನೆಗಳಿಗೆ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ಸತ್ಯನಾರಾಯಣ ಹಾಗೂ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ರವರ ನೇತೃತ್ವದಲ್ಲಿ ಪೊಲೀಸರು ತೆರಳಿ ಎಚ್ಚರಿಕೆ ನೀಡಿ ಬಂದಿರುವುದಾಗಿ ತಿಳಿದುಬಂದಿದೆ.