ಮಾ.08 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪೂಜೆಯು ಮಾ.08 ರಂದು ನಡೆಯಲಿದೆ.
ಮಾ.08 ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಪ್ರತಿಷ್ಠಾ ವಾರ್ಷಿಕೋತ್ಸವದ ಲೆಕ್ಕಪತ್ರ ಮಂಡನೆ, ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ರಾತ್ರಿ ಗಂಟೆ 7.00 ರಿಂದ ರಂಗಪೂಜೆ ( ಸೇವಾರ್ಥಿಗಳಿಂದ) ನಡೆಯಲಿದೆ.
ಗಂಟೆ 8.00 ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.