ಅರಂಬೂರು: ಬಸ್ ಬೈಕ್ ಅಪಘಾತ ಪ್ರಕರಣ

0

ಗಂಭೀರ ಗಾಯಗೊಂಡಿದ್ದ ಶಿಕ್ಷಕ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು

ಅರಂಬೂರಿನ ಪಾಲಡ್ಕ ಎಂಬಲ್ಲಿ ಮಾ.1ರಂದು ಬೆಳಿಗ್ಗೆ ಸಂಭವಿಸಿದ ಬಸ್ – ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ, ಇದೀಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಪಾಲಡ್ಕದಲ್ಲಿ ಇಂದು ಬೆಳಿಗ್ಗೆ ಖಾಸಗಿ ಬಸ್ ಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಇದೀಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.