ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

0

ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ,ಕಾರ್ಯಕ್ರಮ ನಿರೂಪಕ ಮನೋಹರ್ ಪ್ರಸಾದ್ ಅವರು ಇಂದು ನಿಧನರಾಗಿದ್ದು, ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.


ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಮನೋಹರ ಪ್ರಸಾದರ ಬಗ್ಗೆ ಮಾತನಾಡಿದರು. ಪ್ರೆಸ್ ಕ್ಲಬ್ ಉಪಾಧ್ಯಕ್ಷ ಜೆ.ಕೆ.ರೈ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಈಶ್ವರ ವಾರಣಾಶಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್ ಶ್ರದ್ಧಾಂಜಲಿ ಅರ್ಪಿಸಿದರು. ಮೃತರ ಗೌರವಾರ್ಥ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಪತ್ರಕರ್ತರು ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಕೋಶಾಧಿಕಾರಿ ರಮೇಶ್ ನೀರಬಿದಿರೆ ವಂದಿಸಿದರು.