ಅಲೆಕ್ಕಾಡಿಯಲ್ಲಿ ಕಟೀಲು ಮೇಳದ ಶ್ರೀ ದೇವಿ ಲಲಿತೋಪಖ್ಯಾನ ಯಕ್ಷಗಾನ ಬಯಲಾಟ

0

ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸಮಿತಿ ಅಲೆಕ್ಕಾಡಿ, ಮುರುಳ್ಯ ಇವರ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಲಲಿತೋಪಖ್ಯಾನ ಎಂಬ ಯಕ್ಷಗಾನ ಬಯಲಾಟ ಮಾ.1 ರಂದು ಅಲೆಕ್ಕಾಡಿ ಶಾಲಾ ವಠಾರದಲ್ಲಿ ನಡೆಯಿತು.

ಅದೇ ದಿನ ಬೆಳಗ್ಗೆ ಪೂದೆ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ನಡೆದು, ಸಂಜೆ ಚೌಕಿ ಪೂಜೆ ಬಳಿಕ ಯಕ್ಷಗಾನ ಬಯಲಾಟ ನಡೆಯಿತು‌.ರಾತ್ರಿ ಅನ್ನ ಸಂತರ್ಪಣೆ ನಡೆಯಿತು.