ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಶಾಸಕರಿಂದ ಪಲ್ಸ್ ಪೋಲಿಯೋ ಉದ್ಘಾಟನೆ

0

ರೋಟರಿ ಕ್ಲಬ್ ಸುಳ್ಯ, ತಾಲೂಕು ಸಾರ್ವಜನಿಕ ಆಸ್ಪತ್ರೆ ಸುಳ್ಯ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಉದ್ಘಾಟನಾ ಕಾರ್ಯಕ್ರಮ ಮಾ. 3ರಂದು ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಳ್ಯ ರೋಟರಿ ಕ್ಲಬ್‌ನ ಅಧ್ಯಕ್ಷ ಆನಂದ ಖಂಡಿಗರ ಅಧ್ಯಕ್ಷತೆಯಲ್ಲಿ ನಡೆಯಿತು.

ಶಾಸಕಿ ಕು. ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಬಳಿಕ ಮಗುವಿಗೆ ಪಲ್ಸ್ ಪೋಲಿಯೊ ಹನಿ ನೀಡಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ರೋಟರಿ ಕ್ಲಬ್ ಪಲ್ಸ್ ಪೋಲಿಯೊ ಚಯರ್ ಮನ್ ಸವಣೂರು ಕೆ. ಸೀತಾರಾಮ ರೈ ಸ್ವಾಗತಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಸುಳ್ಯ ತಹಶಿಲ್ದಾರ್ ಮಂಜುನಾಥ್, ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ವೀರಪ್ಪ ಗೌಡ, ಇನ್ನರ್ ವ್ಹೀಲ್ ಅಧ್ಯಕ್ಷೆ ಶ್ರೀಮತಿ ಸವಿತಾ ನಾರ್ಕೋಡು, ಸುಳ್ಯ ನಗರ ಪಂಚಾಯತ್ ಸದಸ್ಯೆ ಶ್ರೀಮತಿ ಕಿಶೋರಿ ಶೇಟ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸದಸ್ಯ ಮುಸ್ತಫಾ ಕೆ.ಎಂ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಸುಳ್ಯ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕರುಣಾಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಿರಿಯರಾದ ಆಗ್ರೋ ರಾಮಚಂದ್ರ, ಪ್ರಭಾಕರನ್ ನಾಯರ್, ಗಣೇಶ್ ಭಟ್ ಮಧುಸೂದನ್, ಆಸ್ಪತ್ರೆಯ ಸಿಬ್ಬಂದಿ ವರ್ಗ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ರೋಟರಿ ಸುಳ್ಯ ಸಿಟಿ ಅಧ್ಯಕ್ಷ ಗಿರೀಶ್ ನಾರ್ಕೋಡು ವಂದಿಸಿದರು. ಸವಣೂರು ಸೀತಾರಾಮ ರೈ ಉಪಹಾರದ ವ್ಯವಸ್ಥೆ ಮಾಡಿದ್ದರು.