ಮಾರ್ಚ್ 10ರಂದು ಜಯನಗರದಲ್ಲಿ ವಿಶ್ವ ಮಹಿಳಾ ದಿನಾಚರಣೆ

0

ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ರಿ. ಮತ್ತು ಮೈತ್ರಿ ಮಹಿಳಾ ಮಂಡಲ ಜಯನಗರ ಸುಳ್ಯ ರಿ. ಇವುಗಳ ಜಂಟಿ ಆಶ್ರಯದಲ್ಲಿ ಮಾರ್ಚ್ 10 ರಂದು ಜಯನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಲಿದೆ.

ಬೆಳಿಗ್ಗೆ 9 ಕ್ಕೆ ಆಕರ್ಷಕ ಜಾಥಾ ಕಾರ್ಯಕ್ರಮ ನಡೆಯಲಿದ್ದು 9:30ಕ್ಕೆ ಜಯನಗರ ಶಾಲಾ ರಂಗ ಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ನೆರವೇರಿಸಲಿದ್ದು ಗೌರವ ಉಪಸ್ಥಿತರಾಗಿ ಸುಳ್ಯ ಮಹಿಳಾ ಮಂಡಲಗಳ ಒಕ್ಕೂಟ ರಿ ಅಧ್ಯಕ್ಷೆ ಶ್ರೀಮತಿ ಮಧುಮತಿ ಶೆಟ್ಟಿ ಬೊಳ್ಳೂರು ಭಾಗವಹಿಸಲಿದ್ದಾರೆ.


ಜಯನಗರ ಮೈತ್ರಿ ಮಹಿಳಾ ಮಂಡಲ ಅಧ್ಯಕ್ಷೆ ಶ್ರೀಮತಿ ಶಿಲ್ಪಾ ಸುದೇವ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಸ್ಥಳೀಯ ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ಕೊಡಂಕೇರಿ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಕಾರ್ಯದರ್ಶಿ ಡಾ.ಐಶ್ವರ್ಯ ಕೆ ಸಿ, ಸಿಡಿಪಿಓ ಶ್ರೀಮತಿ ಶೈಲಜಾ,ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸರಸ್ವತಿ,ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವೀಣಾ ಕೆ, ತಾಲೂಕು ಮಹಿಳಾ ಮಂಡಲ ಮಾಜಿ ಅಧ್ಯಕ್ಷರಾದ ಶ್ರೀಮತಿ ಸುಮಾ ಸುಬ್ಬರಾವ್ ಮೊದಲಾದವರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿರುವ ಸಾಧಕರಿಗೆ ನಮ್ಮೂರ ಸೇವಾ ಪ್ರಶಸ್ತಿ, ಹಾಗೂ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಮಹಿಳೆಯರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಲಿದೆ.
ತಾಲೂಕಿನ ಮಹಿಳಾ ಮಂಡಲಗಳ ಸ್ಪರ್ಧೆಗಳು,ಜಾನಪದ ನೃತ್ಯ, ಜಾನಪದ ಸಮೂಹ ಗಾನ,ಕಿರು ಪ್ರಹಸನ ಮುಂತಾದ ಸ್ಪರ್ಧಾ ಕಾರ್ಯಕ್ರಮಗಳು ನಡೆದು ಬಹುಮಾನ ವಿತರಣೆ ನಡೆಯಲಿದೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.