ಐವರ್ನಾಡು ಗ್ರಾಮ ಪಂಚಾಯತ್ ಮಾಸಿಕ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಮರ್ವತಡ್ಕ ದವರೆಗೆ ನಡೆಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಸದಸ್ಯರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಪಂಚಾಯತ್ ಸಿಬ್ಬಂದಿಗಳು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಊರಿನ ಪ್ರಮುಖರು ಭಾಗವಹಿಸಿದರು.