ಗಾಂಧಿನಗರ ಜುಮಾ ಮಸೀದಿ ದಫನ ಭೂಮಿ ಆವರಣ ಗೋಡೆ ಮತ್ತು ಅಭಿವೃದ್ಧಿ ಕಾಮಗಾರಿಗೆ ವಖ್ಫ್ ಇಲಾಖೆಯಿಂದ 10 ಲಕ್ಷ ರೂ.ಅನುದಾನ ಮಂಜೂರು

0

ಸುಳ್ಯ ಗಾಂಧಿನಗರ ಕೇಂದ್ರ ಜುಮಾ ಮಸೀದಿಯ ದಫನ ಭೂಮಿ ಆವರಣ ಗೋಡೆ ಮತ್ತು ಮಸೀದಿ ಅಭಿವೃದ್ಧಿ ಕಾಮಗಾರಿಗೆ ಕರ್ನಾಟಕ ವಕ್ಫ್ ಇಲಾಖೆಯಿಂದ 10 ಲಕ್ಷ ರೂಪಾಯಿ ಅನುದಾನ ಮಂಜೂರು ಗೊಂಡಿದೆ.

ಈ ಅನುದಾನವನ್ನು ತರಿಸುವಲ್ಲಿ ಗಾಂಧಿನಗರ ತರ್ಬಿಯ್ಯತುಲು ಇಸ್ಲಾಂ ಜಮಾಅತ್ ಕಮಿಟಿಯ ಅಧ್ಯಕ್ಷರು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮೀಫ್ ಒಕ್ಕೂಟದ ಉಪಾಧ್ಯಕ್ಷ ಹಾಜಿ ಮುಸ್ತಫ ಜನತಾ ಪ್ರಯತ್ನಿಸಿದ್ದು, ಅನುದಾನ ಬಿಡುಗಡೆಗೊಳಿಸುವಲ್ಲಿ ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಕರ್ನಾಟಕ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ರವರು ಶಿಫಾರಸು ಮಾಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.