ಕಡಬ: ಸರ್ಕಾರಿ ಕಾಲೇಜಿನಲ್ಲಿ ಮುಸುಕು ದಾರಿ ವ್ಯಕ್ತಿಯಿಂದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ,ಮೂವರು ವಿದ್ಯಾರ್ಥಿನಿಯರು ಗಂಭೀರ

0

ಕಡಬ ಸರಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಮುಸುಕು ದಾರಿ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಮಾರ್ಚ್ 4 ರಂದು ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಭಿನ್ ಎಂಬಾತನನ್ನು ಪೊಲೀಸರು ವಶಕ್ಕೆ ಕ್ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನು ತಿಳಿಯಬೇಕಾಗಿದೆ.