ದ.ಕ.ಜಿಲ್ಲಾ ಒಕ್ಕಲಿಗರ ಸಂಘದಿಂದ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳ ಭೇಟಿ

0

ಮಂಗಳೂರು ನಗರದ ಕಾವೂರಿನ ಶ್ರೀ ಆದಿಚುಂಚನಗಿರಿ ಮಠದಲ್ಲಿ ಒಕ್ಕಲಿಗ ಗೌಡ ಸಮುದಾಯದ ಅಭ್ಯುದಯಕ್ಕಾಗಿ ಜಿಲ್ಲೆಯಲ್ಲಿ ನೂತನವಾಗಿ ಕಾರ್ಯಾರಂಭಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ಇಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನೂತನವಾಗಿ ಕಾರ್ಯಾರಂಭಗೊಂಡಿರುವ ಸಂಘವನ್ನು ಉದ್ದೇಶಿಸಿ ಆಶೀರ್ವದಿಸಿದ ಸ್ವಾಮೀಜಿಗಳು ಜಿಲ್ಲೆಯಲ್ಲಿರುವ ಒಕ್ಕಲಿಗ ಗೌಡ ಸಮುದಾಯದ ಸಾಮಾಜಿಕ ಸ್ಥಿತಿಗತಿಯ ಅನುಸಾರವಾಗಿ, ಸಮಾಜದ ಆಸ್ತಿಯಾದ ಯುವ ಸಮುದಾಯವನ್ನು ಸಮಾಜದೊಂದಿಗೆ ಜೋಡಿಸಿಕೊಂಡು ಸಮಾಜದ ಅಭ್ಯುದಯಕ್ಕಾಗಿ ಕೆಲಸ ಮಾಡುವಂತೆ ಅದಕ್ಕಾಗಿ ಸರ್ವವ್ಯಾಪಿ ಸರ್ವಸ್ಪರ್ಶಿ ಯೋಜನೆಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಶ್ರೀ ಆದಿಚುಂಚನಗಿರಿ ಶಾಖೆಯ ಕಾರ್ಯದರ್ಶಿಗಳಾದ ಶ್ರೀ ಡಾ. ಧರ್ಮ ಪಾಲನಾಥ ಸ್ವಾಮೀಜಿ, ಜಿಲ್ಲಾ ಸಂಘದ ಅಧ್ಯಕ್ಷರಾದ ಡಿ.ಬಿ. ಬಾಲಕೃಷ್ಣ, ಉಪಾಧ್ಯಕ್ಷರಾದ ಪುರಂದರ ಗೌಡ, ಪ್ರಧಾನ ಕಾರ್ಯದರ್ಶಿ ಎನ್.ಎ.ಜ್ಞಾನೇಶ್, ಜಂಟಿ ಕಾರ್ಯದರ್ಶಿ ದಾಮೋದರ ಗೌಡ, ಕೋಶಾಧಿಕಾರಿ ಕೆ.ವಿಶ್ವನಾಥ್ ಗೌಡ, ಜಂಟಿ ಕೋಶಾಧಿಕಾರಿ ಸೂರಜ್ ಕುಮಾರ್ ವಲಂಬ್ರ, ಕಾರ್ಯಕಾರಿ ಸದಸ್ಯರುಗಳಾದ ರಕ್ಷಿತ್ ಪುತ್ತಿಲ, ಅನೂಪ್ ನರಿಯೂರು, ವಚನಾ ಜಯರಾಂ, ವಿಜಯ ಗೌಡ, ಯಶವಂತ ಕಳುವಾಜೆ, ಬಿ.ಅಮರನಾಥ್, ಗೌರಿ ಎಚ್, ಸಾರಿಕಾ ಸುರೇಶ್, ವಿಶ್ವನಾಥ್ ನಾಯ್ತೊಟ್ಟು, ಮತ್ತು ಲಿಂಗಯ್ಯ ಯು.ಎಸ್ ಉಪಸ್ಥಿತರಿದ್ದರು.