ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ” ರಾಷ್ಟ್ರೀಯ ವಿಜ್ಞಾನ ದಿನಾಚರಣೆ”

0

ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ” ರಾಷ್ಟ್ರೀಯ ವಿಜ್ಞಾನ ದಿನಾಚರಣೆ” ಪ್ರಯುಕ್ತ “ಸೈನ್ಸ್ ಫೆಸ್ಟ್- 2024” ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸೈನ್ಸ್ ಫೆಸ್ಟ್ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈನ್ಸ್ ಟಾಕ್ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ಪ್ರದರ್ಶನವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮವನ್ನು ಮೇಣ ಮತ್ತು ಬೆಂಕಿಯ ಸಾಂದ್ರತೆಯನ್ನು ಪ್ರದರ್ಶಿಸುವ ಮೂಲಕ ಶಾಲೆಯ ಪ್ರಾಂಶುಪಾಲರಾದ ಶೋಭಾ ಕಿಶೋರ್ ಉದ್ಘಾಟನೆ ಮಾಡಿದರು. ಸೈನ್ಸ್ ಟಾಕ್ ಮತ್ತು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಎಲ್ಲಾ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರು, ಶಿಕ್ಷಕರು – ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಸುಮಾ ನಿರೂಪಿಸಿ ವಂದಿಸಿದರು.