ಕಾಯರ್ತೋಡಿ: ಸೂರ್ತಿಲ ಶ್ರೀ ರಕ್ತೇಶ್ವರಿ ಕ್ಷೇತ್ರದಲ್ಲಿ ತಾಂಬೂಲ ಪ್ರಶ್ನೆ

0

ಸುಳ್ಯದ ಕಾಯರ್ತೋಡಿಯ ಸೂರ್ತಿಲ ಶ್ರೀ ರಕ್ತೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶ ಕಳೆದು ಒಂದು ವರ್ಷ ಸಮೀಪಿಸುತ್ತಿದ್ದು ಕ್ಷೇತ್ರದಲ್ಲಿ ಮುಂದೆ ನಡೆಯುವ ಕಾರ್ಯಕ್ರಮಗಳ ಬಗ್ಗೆ ತಿಳಿದುಕೊಳ್ಳಲು ಜ್ಯೋತಿಷ್ಯ ದಾಮೋದರ ಕೊಳತ್ತೂರು ಅವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಸೇವಾ ಸಮಿತಿ ಅಧ್ಯಕ್ಷ ಶಶಿಧರ ಪಡ್ಪು, ಬ್ರಹ್ಮಕಲಶ ಸಮಿತಿ ಕೋಶಧಿಕಾರಿ ಗಣೇಶ್ ಆಳ್ವ, ಸೇವಾ ಸಮಿತಿ ಕಾರ್ಯದರ್ಶಿ ಜಯರಾಮ್ ನಾಯಕ್ ಸೂರ್ತಿಲ, ಎಲ್ಲಾ ಸೇವಾ ಸಮಿತಿ ಸದಸ್ಯರು, ಬ್ರಹ್ಮಕಲಶ ಸಮಿತಿಯ ಪದಾಧಿಕಾರಿಗಳು, ವಿವಿಧ ಮಹಿಳಾ ಸಮಿತಿಯ ಪದಾಧಿಕಾರಿಗಳು, ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.