ಕಡಬ ಕಾಲೇಜ್ ವಿದ್ಯಾರ್ಥಿನಿಯರಿಗೆ ಆಸಿಡ್ ಎರಚಿದ ಪ್ರಕರಣ

0

ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಆಸಿಡ್ ಎರಚಿರುವ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡು ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಡಬದಂತ ಸರ್ಕಾರಿ ಕಾಲೇಜ್ ಪ್ರದೇಶದಲ್ಲಿ ಮೂವರು ವಿದ್ಯಾರ್ಥಿ ನಿಗಳ ಮೇಲೆ ಅಸಿಡ್ ಎರಚಿ ಕಾನೂನು ಕೈಗೆತ್ತಿಕೊಂಡಿರುವ ಆರೋಪಿಗೆ ತಕ್ಕ ಶಿಕ್ಷೆ ವಿಧಿಸಬೇಕು,ಇದರ ಹಿಂದೆ ಗಾಂಜಾ,ಮಾದಕ ದ್ರವ್ಯ ಗಳ ಬಗ್ಗೆ ಸಂಶಯವಿದ್ದು,ಸಾರ್ವಜನಿಕ ರು ಭಯಬಿತರಾಗಿದ್ದರೆ,ಆರೋಪಿ ಕೇರಳ ಮೂಲದವನಾಗಿದ್ದು ಆತನ ಬಗ್ಗೆ ಸಮಗ್ರ ತನಿಖೆಯಾಗಬೇಕು,ಪೊಲೀಸ್ ಇಲಾಖೆ ಈ ವಿಚಾರದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ,ಮುಂದಿನ ದಿನಗಳಲ್ಲಿ ಈ ರೀತಿ ಘಟನೆ ನಡೆಯದಂತೆ ಕ್ರಮ ಕೈಗೊಳ್ಳುವುದರ ಜೊತೆಗೆ ಕಾಲೇಜ್ ಅವರಣಗಳಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳ ಚಲನವಲನದ ಬಗ್ಗೆ ಗಂಭೀರವಾಗಿ ಗಮನಹರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳನ್ನು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.