ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವರ ಜಾತ್ರೋತ್ಸವ

0

ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮ

ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವರ ವರ್ಷಾವಧಿ ಜಾತ್ರೋತ್ಸವ ಕಾರ್ಯಕ್ರಮವು ಮಾ.4 ರಂದು ಆರಂಭಗೊಂಡಿದ್ದು, ಬೆಳಿಗ್ಗೆ ತೋರಣ ಮುಹೂರ್ತ, ಉಗ್ರಾಣ ಪೂಜೆ, ಹಸಿರುವಾಣಿ ಸಮರ್ಪಣೆ ಹಾಗೂ ವೈಧಿಕ ಕಾರ್ಯಕ್ರಮಗಳು ನಡೆಯಿತು.

ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪಿ.ಎಸ್.ಗಂಗಾಧರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಶ್ರೀಮತಿ ಶಂಕರಿ ಅಮ್ಮ ಉಬರಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಎಂ.ಎಚ್., ಜಾತ್ರೋತ್ಸವ ಸಮಿತಿ ಖಜಾಂಜಿ ಶಿವರಾಮ ಎಂ.ಪಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಜತ್ತಪ್ಪ ಗೌಡ , ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಸದಸ್ಯರಾದ ಯು.ವಿ ಭಾಸ್ಕರ ರಾವ್, ಗಿರಿಧರ ದಾಸ್, ಗಿರೀಶ್ ರೈ, ಶಶಿಧರ ನಾಯರ್, ರಮೇಶ್ ಪಾನತ್ತಿಲ, ಶಾರದಾ ಡಿ. ಶೆಟ್ಟಿ., ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ರತ್ನಾಕರ ಗೌಡ ಬಳ್ಳಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿ ಗೊನೆ ಕಡಿದ ನಂತರ ಕೇವಲ ಒಂದು ವಾರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ ಎಂದರು.

ಸಮಾರಂಭದಲ್ಲಿ ದಾಮೋದರ ಗೌಡ ಮದುವೆಗದ್ದೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗೌರವ ಸ್ವೀಕರಿಸಿ ಮಾತನಾಡಿದ ಅವರು ದೇವಸ್ಥಾನದ ಪೌಳಿ ಸುತ್ತ ಗ್ರಾನೈಟ್ ನ್ನು ಜ್ಞಾನಧಾಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಳವಡಿಸಿಕೊಡಲಾಗುವುದು ಎಂದರು.

ಜಾತ್ರೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಯು. ಸ್ವಾಗತಿಸಿದರು.
ಜಾತ್ರೋತ್ಸವ ಸಮಿತಿ ಸಂಚಾಲಕ ದಿವಾಕರ ಗೌಡ ಶೆಟ್ಟಿಹಿತ್ಲು ವಂದಿಸಿದರು.
ಅಪ್ರಮೇಯ ಆರ್ ಪ್ರಾರ್ಥಿಸಿ, ವಿಜಯಕುಮಾರ್ ಉಬರಡ್ಕ ಕಾರ್ಯಕ್ರಮ ನಿರೂಪಿಸಿದರು.

ಸಂಜೆ ಊರಿನ ಅಂಗನವಾಡಿ, ಶಾಲಾಮಕ್ಕಳು ಹಾಗೂ ಭಕ್ತಾಭಿಮಾನಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಳ್ವಾಸ್ ಧೀಂಕಿಟ ಯಕ್ಷ ಅಧ್ಯಯನ ಕೇಂದ್ರ ಮೂಡುಬಿದಿರೆ ಇವರಿಂದ ನರಶಾರ್ದೂಲ ಯಕ್ಷಗಾನ ನಡೆಯಿತು.