ಚೊಕ್ಕಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

0

ಅಮರಪಡ್ನೂರು ಗ್ರಾಮದ ವ್ಯಾಪ್ತಿಯಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚೊಕ್ಕಾಡಿ ಅಂಗನವಾಡಿ ಕೇಂದ್ರದಲ್ಲಿ ಮಾ‌.3 ರಂದು ಪಂಚಾಯತ್ ಸದಸ್ಯ ಅಶೋಕ್ ಚೂಂತಾರು ರವರು ಚಾಲನೆ ನೀಡಿದರು.
ಒಟ್ಟು 124 ಮಕ್ಕಳಿಗೆ ಲಸಿಕೆ ನೀಡಲಾಯಿತು.


ಈ ಸಂದರ್ಭದಲ್ಲಿ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಚಂದ್ರಾವತಿ, ಆರೋಗ್ಯ ಸುರಕ್ಷಾಧಿಕಾರಿ ಕು.ದಿವ್ಯಾ, ಅಂಗನವಾಡಿ ಕಾರ್ಯಕರ್ತೆ ಹೇಮಾವತಿ, ಆಶಾ ಕಾರ್ಯಕರ್ತೆ ರತ್ನಾವತಿ ಹಾಗೂ ಯೋಗಿನಿ ಉಪಸ್ಥಿತರಿದ್ದರು.