ಎಣ್ಮೂರಿನ ಮನೆಯಲ್ಲಿ ಎನ್.ಐ.ಎ.ಅಧಿಕಾರಿಗಳ ತಂಡದಿಂದ ಪರಿಶೀಲನೆ

0

ಎನ್‌ಐಎ ಅಧಿಕಾರಿಗಳ ತಂಡವೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕಲ್ಲೇರಿಯ ಮನೆಯೊಂದಕ್ಕೆ ಇಂದು ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.

ಕಲ್ಲೇರಿಯ ಮನೆಯವರೊಬ್ಬರ ಕೊಠಡಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಬಾಡಿಗೆಗಿದ್ದು ಅವರ ಕೊಠಡಿಗೆ ಎನ್‌ಐಎ ಅಧಿಕಾರಿಗಳ ತಂಡವು ದಿಢೀರ್ ದಾಳಿ ಮಾಡಿ ಮಾಹಿತಿ ಕಲೆ ಹಾಕಿರುವುದಾಗಿ ತಿಳಿದು ಬಂದಿದ್ದು, ಮನೆಯವರನ್ನು ವಶಕ್ಕೆ ಪಡೆದಿರುವುದಾಗಿ ಮಾಹಿತಿ ಲಭಿಸಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.