ಚುನಾವಣಾ ಆಯೋಗವು ಮಾರ್ಚ್ ಮಧ್ಯದಲ್ಲಿ ಅಂದರೆ ಮಾರ್ಚ್ 14 ಅಥವಾ 15 ರಂದು ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.









ಏಳು ಹಂತಗಳಲ್ಲಿ ದೇಶಾದ್ಯಂತ ಸಂಸತ್ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೆಲ ಮೂಲಗಳ ಮಾಹಿತಿ ಪ್ರಕಾರ, ಮಾರ್ಚ್ 14 ಅಥವಾ 15 ರಂದು ಲೋಕಸಭಾ ಚುನಾವಣೆ ಘೋಷಣೆಯಾಗಲಿದೆ. 2019ರ ಲೋಕಸಭಾ ಚುನಾವಣೆಯಂತೆಯೇ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ಏಪ್ರಿಲ್ 2ನೇ ವಾರದಲ್ಲಿ ನಡೆಯುವ ಸಾಧ್ಯತೆ ಇದೆ.
ಮಾರ್ಚ್ 14 ರಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ.









