ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕುಟುಂಬ ಸಮ್ಮಿಲನ ಮತ್ತು ಪ್ರತಿಭಾಪುರಸ್ಕಾರ ಕಾರ್ಯಕ್ರಮ

0

ಅರಂತೋಡು ಪಟೇಲ್ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾಷ್ಟ್ರಮಟ್ಟದಲ್ಲಿ ಹಾಗೂ ರಾಜ್ಯಮಟ್ಟದ ಮುಸಾಬಕ ಪ್ರತಿಭಾ ಸಂಗಮದಲ್ಲಿ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನ ಕಾರ್ಯಕ್ರಮ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ಬಿಳಿಯಾರು ಬದ್ರುದ್ದೀನ್ ಪಟೇಲ್ ಮನೆಯ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗಾಂಧಿನಗರ ದ.ಕ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷ ಹಾಜಿ ಕೆ.ಎಂ ಮುಸ್ತಫಾ ಉದ್ಘಾಟಿಸಿದರು.
ಅಲ್ ಹಾಜ್ ಇಸಾಕ್ ಬಾಖವಿ ದುವಾಶಿರ್ವಚನ ಮಾಡಿದರು
ಹಾಜಿ ಅಹಮದ್ ಪಟೇಲ್, ಅಬ್ದುಲ್ ಖಾದರ್ ಪಟೇಲ್, ಮಹಮ್ಮದ್ ಹಾಜಿ, ಮೊದಲಾದವರು ಉಪಸ್ಥಿತರಿದ್ದರು. ಪತ್ರಕರ್ತ ಶರೀಫ್ ಜಟ್ಟಿಪಳ್ಳ ಶುಭಹಾರೈಸಿದರು.
ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ ಪಟೇಲ್ ಟ್ರಸ್ಟ್ ವತಿಯಿಂದ ಗೌರವಿಸಿ ಅಬಿನಂದಿಸಲಾಯಿತು.
ಪಟೇಲ್ ಟ್ರಸ್ಟ್ ನ ಬದ್ರುದ್ದೀನ್ ಪಟೇಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪಸಲು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು