ನವೀನ್ ಚಾತುಬಾಯಿಯವರಿಗೆ ಉಳ್ಳಾಲ ಕೃಷಿ ಮತ್ತು ತೋಟಗಾರಿಕಾ ಕೇಂದ್ರದಿಂದ ಜಿಲ್ಲಾ ಪ್ರಗತಿಪರ ಕೃಷಿಕ ಪುರಸ್ಕಾರ

0

ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೃಷಿಕ ನವೀನ್ ಚಾತುಬಾಯಿಯವರಿಗೆ ಉಳ್ಳಾಲ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಿಂದ ಜಿಲ್ಲಾ ಮಟ್ಟದ ಪ್ರಗತಿಪರ ಕೃಷಿಕ ಪುರಸ್ಕಾರ ದೊರೆಯಿತು.


ಮಾರ್ಚ್ 6ರಂದು ಉಳ್ಳಾಲದಲ್ಲಿ ನಡೆದ ಗೇರು ಮೇಳ ಮತ್ತು ವಿಚಾರ ಸಂಕಿರಣ-2024 ಕಾರ್ಯಕ್ರಮದಲ್ಲಿ ಜಿಲ್ಲೆಯ 5 ಜನ ಪ್ರಗತಿಪರ ಕೃಷಿಕರಿಗೆ ಪುರಸ್ಕಾರ ಮಾಡಿ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಗೇರು ನಿಗಮದ ನೂತನ ಅಧ್ಯಕ್ಷರಾದ ಮಮತಾ ಗಟ್ಟಿಯವರು ಉದ್ಘಾಟಿಸಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿಗಳು,ಉಳ್ಳಾಲ ಕೃಷಿ ಮತ್ತು ತೋಟಗಾರಿಕಾ ಸಂಶೋಧನ ಕೇಂದ್ರದ ಮುಖ್ಯಸ್ಥರು,ಬ್ರಹ್ಮಾವರ ಸಂಶೋಧನಾ ಕೇಂದ್ರದ ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ ,ದ.ಕ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಕೃಷಿಕ ಸಮಾಜದ ಮುಖ್ಯಸ್ಥರು ಉಪಸ್ಥಿತರಿದ್ದರು.