ಮಾ.10ರಂದು ಅಡ್ಪಂಗಾಯ ಶಾಲಾ ನೂತನ ಕೊಠಡಿ ಉದ್ಘಾಟನೆ

0

ಅಜ್ಜಾವರ ಗ್ರಾಮದ ಅಡ್ಪಂಗಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಉದ್ಘಾಟನೆಯು ಮಾ.10ರಂದು‌ ನಡೆಯಲಿದೆ.

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ.

ಶಾಸಕಿ ಭಾಗೀರಥಿ ‌ಮುರುಳ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ನಳಿನ್ ಕಟೀಲ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ.