ಸಂಪಾಜೆ: ಕೈಪಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ತಡೆಬೇಲಿಗೆ ಕಾರು ಢಿಕ್ಕಿ : ಜಖಂ

0

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ತಡೆಬೇಲಿಗೆ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ದ.ಕ. ಸಂಪಾಜೆ ಗ್ರಾಮದ ಕೈಪಡ್ಕದಲ್ಲಿ ಮಾ.9ರಂದು ಬೆಳಿಗ್ಗೆ ಸಂಭವಿಸಿದೆ.

ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿ‌‌ನಲ್ಲಿ ಮಗು ಸೇರಿದಂತೆ ದಂಪತಿಗಳಿದ್ದು, ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.