ಸುಳ್ಯ‌ ನಗರಕ್ಕೆ ಶುದ್ಧ‌ ಕುಡಿಯುವ ನೀರು ಪೂರೈಕೆ ಕಾಮಗಾರಿ : ಸಾರ್ವಜನಿಕರು ಸಹಕಾರ ನೀಡಿ

0

ಗುತ್ತಿಗೆದಾರರ ಮನವಿ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಅಮೃತ್ 2 ಯೋಜನೆಯಡಿಯಲ್ಲಿ ಸಮರ್ಪಕ ಶುದ್ಧ ಕುಡಿಯುವ ನೀರಿನ ಯೋಜನೆಯ ಪೈಪು ಲೈನ್ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಪೈಪ್ ಹಾಕುವ ಸಂದರ್ಭದಲ್ಲಿ ಹಳೆಯ ಪೈಪ್ ಗಳು ಹಾನಿಯಾಗಿ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಹುದು. ಅಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ಸುಳ್ಯದ ಪ್ರತೀ ಮನೆ ಮನೆಗೂ ಅತ್ಯಂತ ಶುದ್ಧ ನೀರು ಪೂರೈಕೆ ಮಾಡುವ ಯೋಜನೆ ಇದಾಗಿದ್ದು ಮುಂದಿನ ಒಂದು ವರ್ಷದಲ್ಲಿ ಪ್ರತೀ ಮನೆಗೆ ಶುದ್ಧ ನೀರು ಪೂರೈಕೆಯಾಗಲಿದೆ,ಆದುದರಿಂದ ಸಾರ್ವಜನಿಕರು ನಮ್ಮೊಂದಿಗೆ ಸಹಕರಿಸಿ ಹೆಚ್ಚಿನ ದೂರುಗಳಿಗೆ ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಪೈಪ್ ಹಾಕುವ ಸಂದರ್ಭದಲ್ಲಿ ರಸ್ತೆಗೆ ಹಾನಿಯಾಗಿದ್ದರೆ ಅದನ್ನು ಸರಿಪಡಿಸುವ ಜವಾಬ್ದಾರಿಯೂ ನಮ್ಮದೇ ಆಗಿರುತ್ತದೆ (+918951452363)
ಎಂದು ಗುತ್ತಿಗೆದಾರರು ತಿಳಿಸಿದ್ದಾರೆ.