ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ ಸಂಭ್ರಮ

0

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ ಉತ್ಸವವವು ಮಾ.8ರಂದು ಜರುಗಿತು.

ಮಾ.8ರಂದು ಬೆಳಿಗ್ಗೆ ಬ್ರಹ್ಮಶ್ರೀ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಗಣಪತಿ ಹೋಮ, ದೇವರಗುಂಡಿಯಿಂದ ತೀರ್ಥ ತಂದು ಏಕದಶ ರುದ್ರಾಭಿಷೇಕ, ತಂತ್ರಿವರ್ಯರಿಂದ ಪಂಚವಿಂಶತಿ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ,
ರಾತ್ರಿ ದೇವರಿಗೆ ರಂಗಪೂಜೆ, ಉತ್ಸವ ಬಲಿ ಜರುಗಿತು.
ಈ ಸಂದರ್ಭದಲ್ಲಿ ದೇವಳದ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.